ಅಮಿತ್‌ ಶಾ ರಾಜ್ಯ ಭೇಟಿ: ಮೂರು ದಿನ, 45 ಗಂಟೆ, 25 ಕಾರ್ಯಕ್ರಮ


Team Udayavani, Aug 8, 2017, 9:50 AM IST

08-STATE-5.jpg

ಬೆಂಗಳೂರು: ಮೂರು ದಿನ, ಸುಮಾರು 45 ಗಂಟೆ, 25 ಕಾರ್ಯಕ್ರಮಗಳ ಮೂಲಕ ಜಿಲ್ಲಾ ಮತ್ತು ತಾಲೂಕು ಮಟ್ಟದಿಂದ ರಾಜ್ಯಮಟ್ಟದವರೆಗೆ ಎಲ್ಲ ವಿಭಾಗಗಳ ಮುಖಂಡರನ್ನು ತಲುಪುವ ಪ್ರಯತ್ನ. 

ಇದು ದೇಶಾದ್ಯಂತ ಎಲ್ಲ ರಾಜ್ಯಗಳಿಗೆ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಆಗಸ್ಟ್‌ 12ರಿಂದ 14ರವರೆಗೆ ಮೂರು ದಿನಗಳ ರಾಜ್ಯ ಭೇಟಿ ಸಂದರ್ಭದಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಪಟ್ಟಿ. ಆ. 12ರಂದು ಬೆಳಗ್ಗೆ 10.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಅಮಿತ್‌ ಶಾ ಅವರು ಆ. 14ರಂದು ಸಂಜೆ ಹಿಂತಿರುಗುವವರೆಗೆ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಮಿತ್‌ ಶಾ ಅವರ ಕಾರ್ಯ ಕ್ರಮಗಳ ಪಟ್ಟಿ ನೀಡಿದ ರಾ ಬಿಜೆಪಿ ವಕ್ತಾರರೂ ಆಗಿರುವ ಶಾಸಕ ಎಸ್‌. ಸುರೇಶ್‌ಕುಮಾರ್‌, ಈ ಪ್ರವಾಸ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ “ಸರ್ವಸ್ಪರ್ಷಿ ಮತ್ತು ಸರ್ವವ್ಯಾಪಿ’ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು. 

ಆ. 12ರಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅಮಿತ್‌ ಶಾ ಅವರಿಗೆ ವಿಮಾನ ನಿಲ್ದಾಣ ಸಮೀಪದ ಟೋಲ್‌ ಬಳಿ ಪಕ್ಷದ ವತಿಯಿಂದ ಅದ್ಧೂರಿ ಸ್ವಾಗತ ಕೋರಿ ನೇರವಾಗಿ ಮಲ್ಲೇಶ್ವರದಲ್ಲಿರುವ ಪಕ್ಷದ ರಾಜ್ಯ ಕಚೇರಿ ಜಗನ್ನಾಥ ಭವನಕ್ಕೆ ಕರೆತರಲಾಗುವುದು. ಶಾ ಅವರು ಮೂರು ದಿನಗಳ ಕಾಲ ಪಕ್ಷದ ಕಾರ್ಯಚಟುವಟಿಕೆಗಳ ಜತೆಗೆ ಪಕ್ಷದ ಹಿತೈಷಿಗಳು, ಮಠಾಧೀಶರು, ವಿವಿಧ ಗಣ್ಯರು, ಉದ್ಯಮಿಗಳು, ವಿಚಾರವಂತರನ್ನು ಕೂಡ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಿದರು.

ಮೂರು ದಿನಗಳ ಕಾಲ ಅಮಿತ್‌ ಶಾ ಅವರು ಪಾಲ್ಗೊಳ್ಳಲಿರುವ ಒಟ್ಟು 25 ಕಾರ್ಯ ಕ್ರಮಗಳ ಪೈಕಿ 16 ಕಾರ್ಯ ಕ್ರಮಗಳನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಇದರ ಮಧ್ಯೆ ಉಳಿದ 9 ಕಾರ್ಯಕ್ರಮಗಳನ್ನು ಅಂತಿಮ ಕ್ಷಣದಲ್ಲಿ ತೀರ್ಮಾನಿಸಲಾಗುತ್ತದೆ ಎಂದರು.

ನಿಗದಿಯಾಗಿರುವ ಕಾರ್ಯಕ್ರಮಗಳು 
ಆಗಸ್ಟ್‌ 12: ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಗ್ರಂಥಾಲಯ ಮತ್ತು ವಾಚನಾಲಯ ಉದ್ಘಾಟನೆ, ರಾಜ್ಯ ಪದಾಧಿಕಾರಿಗಳು, ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲೆಗಳ ಪ್ರಭಾರಿಗಳು, ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು,
ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರ ಜತೆ ಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು, ಸಂಸದರೊಂದಿಗೆ ಸಮಾಲೋಚನೆ, ವಿಚಾರವಂತರು, ಕೈಗಾರಿಕಾ ಕ್ಷೇತ್ರ, ವಕೀಲರು, ಲೆಕ್ಕ ಪರಿಶೋಧಕರು, ಉದ್ಯಮಿಗಳು ಸೇರಿ ವಿವಿಧ ಕ್ಷೇತ್ರಗಳ ಗಣ್ಯರ ಜತೆ ಸಂವಾದ, ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ. 

ಆಗಸ್ಟ್‌ 13: ರಾಜ್ಯ ಬಿಜೆಪಿ ರಾಜಕೀಯ ವ್ಯವಹಾರ ಸಮಿತಿ ಸಭೆ, ಮಂಡ್ಯ ಜಿಲ್ಲೆ ನಾಗಮಂಗಲದ ಆದಿಚುಂಚನಗಿರಿ ಮಠಕ್ಕೆ ಭೇಟಿ, ಬಿಜೆಪಿ 10 ವಿಭಾಗ ಮತ್ತು 19 ಪ್ರಕಲ್ಪಗಳ ಪದಾಧಿಕಾರಿಗಳ ಜತೆ ಸಭೆ, ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಭೇಟಿ. ಈ ಪೈಕಿ ಆದಿಚುಂಚನಗಿರಿ ಮಠ ಮತ್ತು ರವಿಶಂಕರ ಗುರೂಜಿ ಆಶ್ರಮದ ಕಾರ್ಯಕ್ರಮಗಳನ್ನು ಮಠ ಮತ್ತು ಆಶ್ರಮದ ವತಿಯಿಂದಲೇ ಕೈಗೊಳ್ಳಲಾಗಿದೆ.

ಆಗಸ್ಟ್‌ 14: ಜಿಲ್ಲಾ ಮಟ್ಟದ ವಿಸ್ತಾರಕರೊಂದಿಗೆ ಸಭೆ ಮತ್ತು ಮುಂದಿನ ಹೆಜ್ಜೆ ಬಗ್ಗೆ ಮಾರ್ಗದರ್ಶನ, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 2014ರ ಲೋಕಸಭೆ  ಚುನಾವಣೆಯಲ್ಲಿ ಪಕ್ಷ ಸೋಲು ಅನುಭವಿಸಿದ 11 ಕ್ಷೇತ್ರಗಳ ಪ್ರಮುಖರ ಜತೆ ಸಭೆ, ಮಾಧ್ಯಮ ಪ್ರಕೋಷ್ಠ ಮತ್ತು ಸಾಮಾಜಿಕ ಜಾಲ ತಾಣ ಮಾಧ್ಯಮ ಪ್ರಕೋಷ್ಠದ ಪ್ರಮುಖರ ಜತೆ ಸಮಾಲೋಚನೆ, ಪತ್ರಿಕಾಗೋಷ್ಠಿ, ಅನ್ಯ ಪಕ್ಷಗಳು ಸೇರಿ ವಿವಿಧ ಕ್ಷೇತ್ರಗಳಿಂದ ಇತ್ತೀಚೆಗೆ ಬಿಜೆಪಿ ಸೇರಿದ ಪ್ರಮುಖರೊಂದಿಗೆ ಸಮಾಲೋಚನೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರೊಂದಿಗೆ ಸಭೆ, ಹಿಂದುಳಿದ ವರ್ಗಗಳ ಪ್ರಮುಖರ ಜತೆ ಮಾತುಕತೆ.

ಎಲ್ಲೆಲ್ಲಿ ಕಾರ್ಯಕ್ರಮಗಳು?
ಸಭೆಗಳು ಒಂದಕ್ಕೊಂದು ಗೊಂದಲವಾಗದಂತೆ ನೋಡಿಕೊಳ್ಳಲು ಪಕ್ಷದ ಪ್ರಮುಖ ಸಭೆಗಳನ್ನು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಸಲಾಗುತ್ತದೆ. ಹೆಚ್ಚು ಜನ ಮತ್ತು ಗಣ್ಯರು ಸೇರುವ ಸಭೆಗಳನ್ನು ಐಟಿಸಿ ಗಾಡೇìನಿಯಾ ಮತ್ತು ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಆಯೋಜಿಸಲಾಗುತ್ತದೆ. ಆ. 13ರಂದು ಆದಿಚುಂಚನಗಿರಿ ಮಠ ಮತ್ತು ರವಿಶಂಕರ ಗುರೂಜಿ ಆಶ್ರಮಕ್ಕೆ ಭೇಟಿ ನೀಡುತ್ತಿರುವುದರಿಂದ ಸಮಯ ಉಳಿಸುವ ಸಲುವಾಗಿ ಈ ಎರಡು ಕಾರ್ಯಕ್ರಮಗಳ ಮಧ್ಯೆ ಬಿಜೆಪಿ 10 ವಿಭಾಗಗಳು ಮತ್ತು 19 ಪ್ರಕಲ್ಪಗಳ ಪದಾಧಿಕಾರಿಗಳ ಸಭೆಯನ್ನು ತುಮಕೂರು ರಸ್ತೆಯಲ್ಲಿರುವ ಜಿಂದಾಲ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯಾವ್ಯಾವ ಕಾರ್ಯಕ್ರಮಗಳು ಎಲ್ಲೆಲ್ಲಿ
ನಡೆಯುತ್ತವೆ ಎಂಬುದನ್ನು ಆ. 10ರ ವೇಳೆಗೆ ಅಂತಿಮಗೊಳಿಸಲಾಗುತ್ತದೆ.

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.