ರಾಜ್ಯದಲ್ಲಿ 600 ದಾಟಿದ ಕೋವಿಡ್-19 ಸೋಂಕಿತರ ಸಂಖ್ಯೆ
Team Udayavani, May 2, 2020, 5:20 PM IST
ಬೆಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಮತ್ತಷ್ಟು ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 12 ಹೊಸ ಪ್ರಕರಣಗಳು ದೃಢವಾಗಿದ್ದು, ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 600 ದಾಟಿದೆ.
ರಾಜ್ಯ ಆರೋಗ್ಯ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆ ಗೊಳಿಸಿದ ಪಟ್ಟಿಯಲ್ಲಿ 9 ಹೊಸ ಸೋಂಕಿತರ ವಿವರಗಳಿದ್ದು, ಇದೀಗ ಮತ್ತೆ ಮೂರು ಪ್ರಕರಣಗಳು ದೃಢವಾಗಿದೆ.
ಈ ಮೂರು ಹೊಸ ಪ್ರಕರಣಗಳು ಬೆಂಗಳೂರು ನಗರದಲ್ಲಿ ದೃಢವಾಗಿದೆ. ಸೋಂಕಿತ ಸಂಖ್ಯೆ 565ರ ಸಂಪರ್ಕದಿಂದ ಬೆಂಗಳೂರಿನ ಮೂವರಿಗೆ ಸೋಂಕು ದೃಢವಾಗಿದೆ. ನಗರದ 38 ವರ್ಷ ಮತ್ತು 26 ವರ್ಷದ ಮಹಿಳೆಯರು ಮತ್ತು 30 ವರ್ಷದ ಪುರುಷನಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಈ ಮೂರು ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ. ಇವರಲ್ಲಿ 25 ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 271 ಜನರು ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಓರ್ವಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.