ಭಾರಿ ಮಳೆಗೆ ಕುಟುಂಬದ ಮೂವರು ಬಲಿ
Team Udayavani, Aug 29, 2017, 11:57 AM IST
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆ ಯಲ್ಲಿ ಕೊಡಗಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
ಮಲೆನಾಡು, ಕರಾವಳಿ ಭಾಗದಲ್ಲಿಯೂ ಮಳೆ ಆರ್ಭಟ ಜೋರಾಗಿದೆ. ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳಲ್ಲಿ ಮಡಿಕೇರಿ ಮತ್ತು ಆಗುಂಬೆಯಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ.ಮಳೆಯಾಗಿದೆ. ಮಳೆಯಿಂದಾಗಿ ವಿಜಯಪುರದ ಮಠಪತಿ ಗಲ್ಲಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಅಶೋಕ ಗೌಡನ್ನವರ (40), ಪತ್ನಿ ಶಾಂತಾ (37) ಹಾಗೂ ಪುತ್ರ ಚಂದ್ರಶೇಖರ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಯ
ಹೊರಗೆ ಮಲಗಿದ್ದ ಈ ದಂಪತಿಯ ಇನ್ನಿಬ್ಬರು ಮಕ್ಕಳಾದ ಅಜಿತ (7) ಮತ್ತು ರಣಜಿತ (12) ಅಪಾಯದಿಂದ ಪಾರಾಗಿದ್ದಾರೆ. ಬೀದಿ ಬದಿ ತೆಂಗಿನಕಾಯಿ ವ್ಯಾಪಾರ ಮಾಡಿಕೊಂಡಿದ್ದ ಅಶೋಕ, ಮನೆ ಸಣ್ಣದು ಎಂಬ ಕಾರಣಕ್ಕೆ ತಮ್ಮ ಮೂವರು ಮಕ್ಕಳೊಂದಿಗೆ ಮನೆಯ ಹೊರಗೆ
ಮಲಗಿದ್ದರು. ಸೋಮವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಇಬ್ಬರು ಪುತ್ರರನ್ನು ಹೊರಗೆ ಬಿಟ್ಟು, ಪುತ್ರ ಚಂದ್ರಶೇಖರ ಹಾಗೂ ಪತ್ನಿ ಜೊತೆ ಮನೆಯೊಳಗೆ ಹೋಗಿ ಮಲಗಿದ್ದರು. ಮಲಗಿದ ಕೆಲವೇ ಕ್ಷಣದಲ್ಲಿ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಬಿತ್ತು. ಸದ್ದು ಕೇಳಿ ನೆರೆಹೊರೆಯವರು ನೆರವಿಗೆ ಧಾವಿಸಿದರಾದರೂ ಇವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.
ಕೊಡಗಿನಲ್ಲಿ ಧಾರಾಕಾರ ಮಳೆ: ಕೊಡಗಿನಾದ್ಯಂತ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು ನದಿ, ತೊರೆ, ಜಲಪಾತಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಹರಿವು ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಜಿಲ್ಲೆಯ ಎಲ್ಲ ಶಾಲೆ,
ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ತಿಳಿಸಿದ್ದಾರೆ.
ಮಂಜಿನಿಂದ ಮುಚ್ಚಿ ಹೋಗಿರುವ ರಾಜಾಸೀಟು ಉದ್ಯಾನವನ ಹಾಗೂ ಧುಮ್ಮಿಕ್ಕಿ ಹರಿಯುತ್ತಿರುವ ಅಬ್ಬಿ ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ನಿರಂತರ ಮಳೆ ಕಾಫಿ ಬೆಳೆಗೆ ಹಾನಿಯುಂಟು ಮಾಡುವ ಸಾಧ್ಯತೆಗಳಿದ್ದು, ಬೆಳೆಗಾರರು ಚಿಂತೆಗೀಡಾಗಿದ್ದಾರೆ.
ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಹೊಸ್ಮಠ, ಬಿಳಿನೆಲೆ ಮುಳುಗೆ ಸೇತುವೆಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿದೆ. ಮಲೆನಾಡಿನಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ತುಂಗಾ
ಜಲಾಶಯದ ಗರಿಷ್ಠ ಮಟ್ಟ (588.24 ಅಡಿ) ತಲುಪಿದೆ. ಕೇರಳದ ವೈನಾಡು ಸೇರಿದಂತೆ ಹಿನ್ನಿರು ಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಮೈಸೂರು ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಿದೆ. ಈ ಮಧ್ಯೆ,
ಮುಂದಿನ 24 ತಾಸುಗಳಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಎಲ್ಲೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.