ಚಿತ್ತೂರಿನಲ್ಲಿ ಅಪಘಾತ: ಡ್ರಗ್ ಸ್ಮಗ್ಲರ್ ನನ್ನು ಹಿಡಿಯಲು ಹೋದ ಬೆಂಗಳೂರಿನ 3 ಪೊಲೀಸರ ಸಾವು
Team Udayavani, Jul 24, 2022, 9:28 AM IST
ಬೆಂಗಳೂರು: ನೆರೆಯ ಆಂಧ್ರಪ್ರದೇಶದ ಚಿತ್ತೂರು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನ ನಡೆದಿದೆ.
ಮೃತ ಪೊಲೀಸರೆಲ್ಲರೂ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಎಂದು ವರದಿಯಾಗಿದೆ.
ಶಿವಾಜಿ ನಗರ ಠಾಣೆ ಪೊಲೀಸ್ ಸಿಬ್ಬಂದಿಗಳು ಚಿತ್ತೂರಿನಲ್ಲಿ ಡ್ರಗ್ ದಂಧೆಕೋರನನ್ನು ಹಿಡಿಯಲು ತೆರಳುತ್ತಿದ್ದಾಗ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಪಿಎಸ್ಐ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಮಲಿಕ್, ಕಾರು ಚಾಲಕನೊಬ್ಬ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವಗೆ ಗಂಭೀರ ಗಾಯಗಳಾಗಿದ್ದು, ತಮಿಳುನಾಡಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಿಎಸ್ಐ ಅವಿನಾಶ್ ನೇತೃತ್ವದಲ್ಲಿ ಪೊಲೀಸ್ ಟೀಂ ಆಂಧ್ರಕ್ಕೆ ತೆರಳಿತ್ತು.
ಇದನ್ನೂ ಓದಿ:ವಿಮಾನದಲ್ಲಿ ಐಪಿಎಸ್ ಅಧಿಕಾರಿಯ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ
ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ. ಪೊಲೀಸ್ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ ದೂರದ ಮತ್ತೊಂದು ರಸ್ತೆಗೆ ಹಾರಿ ಹೋಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಖಾಸಗಿ ಚಾಲಕ ಸಾವಿಗೀಡಾಗಿದ್ದಾರೆ. ಉಳಿದವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಮುಖ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ, ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ. ಕರ್ನಾಟಕದ ಪೊಲೀಸ್ ತಂಡವು ಅಪಘಾತದ ಸ್ಥಳಕ್ಕೆ ಧಾವಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮೃತದೇಹಗಳು ಹಾಗೂ ಗಾಯಾಳುಗಳನ್ನು ಬೆಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.