ಮಾಸ್ಕ್ ಡೇ ಆಚರಣೆ: ಪಾದಯಾತ್ರೆ ಮೂಲಕ ಅರಿವು ಮೂಡಿಸಿದ ಸಿಎಂ ಯಡಿಯೂರಪ್ಪ
Team Udayavani, Jun 18, 2020, 9:12 AM IST
ಬೆಂಗಳೂರು: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು, ಜನರಿಗೆ ಅರಿವು ಮೂಡಿಸಲು ರಾಜ್ಯ ಸರಕಾರ ಇಂದು ಮಾಸ್ಕ್ ಡೇ ಆಚರಿಸುತ್ತಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ವಿಧಾನಸೌಧದ ಅಬೇಂಡ್ಕರ್ ಪ್ರತಿಮೆಯಿಂದ ಕೆಆರ್ ಸರ್ಕಲ್ ವರೆಗೆ ಪಾದಯಾತ್ರೆ ನಡೆಸಿದರು.
ಈ ಕುರಿತು ಮಾತನಾಡಿದ ಸಿಎಂ ಬಿಎಸ್ ವೈ, ಸೋಂಕು ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡಬೇಕು ಎಂದರು.
ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಮಾಸ್ಕ್ ಅವಶ್ಯಕತೆ ತುಂಬಾ ಇದೆ. ಸೋಪಿನಿಂದ ಕೈ ತೊಳೆದುಕೊಳ್ಳುವುದು, ಸ್ಯಾನಿಟೇಜರ್ ಬಳಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಈ ಸೂಚನೆಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರದ ಜೊತೆಗೆ ಸಾರ್ವಜನಿಕರು ಕೈ ಜೋಡಿಸಬೇಕು. ಮಾಸ್ಕ್ ಧರಿಸುವುದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವುದು ಇತರರ ರಕ್ಷಣೆಗೆ ಸಹಕಾರಿಯಾಗಲಿದೆ ಎಂದರು.
ಹೊರರಾಜ್ಯಗಳಿಂದ ಬಂದಿಲ್ಲ ಎಂದಿದ್ದರೆ ನಮ್ಮಲ್ಲಿ ಸೋಂಕು ಪ್ರಮಾಣ ಹೆಚ್ಚಾಗುತ್ತಿರಲಿಲ್ಲ. ಈಗಾಲಾದರೂ ಎಚ್ಚೆತ್ತುಕೊಳ್ಳಬೇಕು. ಸೋಂಕು ತಡೆಗೆ ಸರಕಾರ ಬಹಳಷ್ಟು ಕ್ರಮ ಕೈಗೊಂಡಿದೆ. ಕೇಂದ್ರ ಸರಕಾರವೂ ಅಗತ್ಯ ವೈದ್ಯಕೀಯ ಸಾಮಾಗ್ರಿ ಪೂರೈಕೆ ಮಾಡಿದೆ. ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತರು ಹಗಲು ರಾತ್ರಿ ದುಡಿಯುತ್ತಿದ್ದಾರೆ ಎಂದರು.
ಪೊಲೀಸ್ ಪಥ ಸಂಚಲನ ಮೂಲಕ ಮುಖ್ಯಮಂತ್ರಿಗಳಿಗೆ ಗೌರವ ನೀಡಲಾಯಿತು. ನಂತರ ಪಾದಯಾತ್ರೆ ಆರಂಭವಾಯಿತು. ಯಡಿಯೂರಪ್ಪ ಜೊತೆಗೆ ಸಚಿವ ಸೋಮಶೇಖರ್, ಆರ್ ಅಶೋಕ್, ಡಿಸಿಎಂ ಗೋವಿಂದ ಕಾರಜೋಳ, ಸಂಸದ ತೇಜಸ್ವಿ ಸೂರ್ಯ, ಸಿಟಿ ರವಿ, ನಟಿ ರಾಗಿಣಿ, ನಟ ಪುನೀತ್ ರಾಜ್ಕುಮಾರ್, ಸಂಸದ ಪಿಸಿ ಮೋಹನ್ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.