Tiger skin ಫೋಟೋ ವೈರಲ್: ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ಉಡುಗೊರೆಯಾಗಿ ನೀಡಿದ್ದು ಯಾರು? ಗುರೂಜಿ ಸ್ಪಷ್ಟನೆ ಏನು?

Team Udayavani, Oct 25, 2023, 6:36 PM IST

1-sdsa

ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು ಡಾಲರ್ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೆ ಕೊಪ್ಪ ತಾಲೂಕು ಗೌರಿಗದ್ದೆ ಅವಧೂತ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ದೂರು ದಾಖಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆ ಮೂಲದ ಅಮರೇಂದ್ರ ಕಿರೀಟಿ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ವಿನಯ್ ಗುರೂಜಿ ಅವರಿಗೆ ಉಡುಗೊರೆಯಾಗಿ ನೀಡಿದ್ದು, ಅವರ ತಂದೆಯ ಕಾಲದಿಂದಲೂ ಅವರ ಮನೆಯಲ್ಲಿದ್ದ ಹುಲಿಚರ್ಮ ಇತ್ತು ಎನ್ನಲಾಗುತ್ತಿದ್ದು, ಆ ಹುಲಿ ಚರ್ಮವನ್ನು ಉಡುಗೊರೆಯಾಗಿ ನೀಡಿದ್ದಾರೆ. 2022ರಲ್ಲಿ ಹುಲಿಚರ್ಮವನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸಿದ್ದಾರೆಂದು ಆಶ್ರಮದವರು ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ.

ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅರಣ್ಯ ಇಲಾಖೆ ಸಿಬಂದಿಗಳು ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ವಿನಯ್ ಗುರೂಜಿ ಪ್ರತಿಕ್ರಿಯೆ ನೀಡಿದ್ದು, ಹುಲಿ ಚರ್ಮವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಯಾವುದೇ ಸಮಯದಲ್ಲಿ ತನಿಖೆಗೆ ಸಿದ್ದವಿದ್ದೇನೆ. ಆಶ್ರಮದಲ್ಲಿ ಒಂದು ದಿನ ಮಾತ್ರ ಹುಲಿ ಚರ್ಮ ಇತ್ತು. ಆ ಸಮಯದಲ್ಲಿ ತೆಗೆದಿರುವ ಪೋಟೋ ಆದಾಗಿದ್ದು, ಆ ಪೋಟೋ ಈಗ ವೈರಲ್ ಆಗಿದೆ. ಕಾನೂನು ರೀತಿಯಲ್ಲಿ ಶಿವಮೊಗ್ಗ ಮೂಲಕದ ಅಮರೇಂದ್ರ ಕಿರೀಟಿ ಅವರ ಬಳಿ ಇತ್ತು. ಅದನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದರು.

‘ಹುಲಿ ಚರ್ಮದ ಮೇಲೆ ಕುಳಿತಿರುವ ಅವಧೂತ ವಿನಯ್ ಗುರೂಜಿಯವರ ವಿಡಿಯೋ ಹಾಗೂ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೊಪ್ಪ ಡಿಎಫ್‌ಓ ನಂದೀಶ್ ಅವರ ನೇತೃತ್ವದ ಮೂವರು ಅಧಿಕಾರಿಗಳ ತಂಡ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ವಿನಯ್ ಗುರೂಜಿ ಅವರಿಂದ ಹೇಳಿಕೆ ಪಡೆದುಕೊಂಡರು.ವಿನಯ್ ಗುರೂಜಿ ಮಾತನಾಡಿ, ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ. ನನ್ನ ಬಳಿ ಮಾತನಾಡಿದ್ದು, ಎಲ್ಲಾ ದಾಖಲೆ ನೀಡಿದ್ದೇನೆ. ಮಾಹಿತಿ ಕೇಳಿದ್ದಾರೆ ನಮ್ಮ ಬಳಿ ಇದ್ದ ಎಲ್ಲಾ ದಾಖಲೆ ಗಳನ್ನು ನೀಡಿದ್ದೇನೆ ಎಂದರು.

‘ಬೆಂಗಳೂರಿನ ಕೇಂದ್ರ ಕಚೇರಿಯಿಂದ ಆಶ್ರಮದಲ್ಲಿ ಪರಿಶೀಲನೆ ನಡೆಸುವಂತೆ ಸೂಚನೆ ಬಂದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದ್ದೇವೆ. ಸ್ಥಳ ಮಹಜರು ಮಾಡಿದ್ದೇವೆ. ವಿನಯ್ ಗುರೂಜಿ ಅವರಿಂದ ಹುಲಿ ಚರ್ಮದ ವಿಚಾರ ಮಾಹಿತಿ ಪಡೆದುಕೊಂಡಿದ್ದೇವೆ. ಎರಡು ವರ್ಷದ ಹಿಂದಿನ ಪೋಟೋ ಎಂದು ಹೇಳಿದ್ದು, ಯಾರು ಕೊಟ್ಟಿದ್ದು ಎಂಬ ಮಾಹಿತಿಯನ್ನು ನೀಡಿದ್ದಾರೆ. ಪರಿಶೀಲನೆ ನಡೆಸಿದ್ದು ಹಿರಿಯ ಅಧಿಕಾರಿ ಗಳಿಗೆ ಮಾಹಿತಿ ನೀಡುತ್ತೇವೆ.’ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.