ಗಣರಾಜ್ಯೋತ್ಸವಕ್ಕೆ ರಾಜ್ಯದಲ್ಲಿ ಕಟ್ಟೆಚ್ಚರ
Team Udayavani, Jan 19, 2021, 10:34 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಉಗ್ರ ಚಟುವಟಿಕೆಗಳ ಶಂಕೆ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ದಳ ರಾಜ್ಯ ಪೊಲೀಸ್ ಇಲಾಖೆಗೆ ಸಂದೇಶ ರವಾನಿಸಿದೆ.
ಕಳೆದ ವರ್ಷ ರಾಜಧಾನಿಯಲ್ಲಿ ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದ ಹಲವು ಮಂದಿ ಉಗ್ರರ ಬಂಧನವಾಗಿದೆ. ಜತೆಗೆ, ಆರೋಪಿಗಳು ನಗರ ಹಾಗೂ ಹೊರವಲಯ ಭಾಗಗಳಲ್ಲಿ ಐಸಿಸ್ ಪರವಾಗಿ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದರು. ಜತೆಗೆ, ಸಂಘಟನೆ ಸಧೃಡಪಡಿಸಲಾಗುತ್ತಿತ್ತು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿತ್ತು.
ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವ ದಿನದಂದು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕಿದೆ. ಹೀಗಾಗಿ, ರಾಜ್ಯದ ಪ್ರಮುಖ ನಗರಗಳು, ಪ್ರಮುಖ ಐತಿಹಾಸಿಕ ಸ್ಥಳಗಳು, ಕರಾವಳಿ ತೀರ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಹಾಗೂ ನಿಗಾವಹಿಸುವಂತೆ ಗುಪ್ತಚರ ದಳ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಗುಪ್ತಚರ ದಳದ ಮಾಹಿತಿ ಮೇರೆಗೆ ಎಚ್ಚೆತ್ತಿರುವ ಪೊಲೀಸ್ ಇಲಾಖೆ, ಆಂತರಿಕ ಭದ್ರತಾ ವಿಭಾಗ ಅಲರ್ಟ್ ಆಗಿದ್ದು. ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ. ನಗರದಲ್ಲಿರುವ ಪ್ರಮುಖ ಐತಿಹಾಸಿಕ ಸ್ಥಳಗಳ ಕಡೆ ನಿಗಾ ಇರಿಸಿವೆ. ಅಷ್ಟೇ ಅಲ್ಲದೆ ನಗರದಲ್ಲಿರುವ ವಿದೇಶಗಳ ರಾಯಭಾರಿ ಕಚೇರಿಗಳಲ್ಲಿ ಭದ್ರತೆಯ ಕುರಿತಾಗಿ ಪರಿಶೀಲನೆ ನಡೆಸಿದ್ದು ಮಾಹಿತಿ ಪಡೆದುಕೊಂಡು ಎಚ್ಚರದಿಂದ ಇರುವಂತೆ ಸಲಹೆ ನೀಡಿದೆ. ಅಷ್ಟೇ ಅಲ್ಲದೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳ ಪೊಲೀಸ್ ವಿಭಾಗಕ್ಕೂ ಗುಪ್ತಚರ ದಳದ ಮಾಹಿತಿ ರವಾನಿಸಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಕೇಂದ್ರ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಐಎಸ್‌ಡಿ ಫುಲ್ ಅಲರ್ಟ್! :
ರಾಜ್ಯದಲ್ಲಿ ಉಗ್ರಚಟುವಟಿಕೆಗಳು, ನಕ್ಸಲ್ ಚಟುವಟಿಕೆಗಳನ್ನು ಪತ್ತೆಹಚ್ಚಲೆಂದೇ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಆಂತರಿಕ ಭದ್ರತಾ ದಳ( ಐಎಸ್‌ಡಿ) ಕೂಡ ಅಲರ್ಟ್ ಆಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಗುಪ್ತಚರ ಮಾಹಿತಿ ಮೇರೆಗೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ.
ಅಷ್ಟೇ ಅಲ್ಲದೆ ಕರಾವಣಿ ತೀರ ಪ್ರದೇಶದ ಮೇಲೂ ಹದ್ದಿನ ಕಣ್ಣಿಟ್ಟಿದ್ದು ಇತ್ತೀಚೆಗೆ ಐಎಸ್‌ಡಿಯ ಹಿರಿಯ ಅಧಿಕಾರಿಗಳು ಕಾರವಾರ, ಉತ್ತರ ಕನ್ನಡ, ಮಂಗಳೂರು, ಕುಮಟಾ ಸೇರಿ ಹಲವು ಕಡಲ ತೀರ ಪ್ರದೇಶಗಳಿಗೆ ಭೇಟಿ ನೀಡಿದ್ದು. ಸಾಗರ ರಕ್ಷಣಾ ದಳದ ಸಿಬ್ಬಂದಿ ಜತೆ ಭದ್ರತಾ ಕ್ರಮಗಳ ಜತೆ ಚರ್ಚೆ ನಡೆಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳ ನಡೆಯದಂತೆ ಯಾವೆಲ್ಲಾ ಕ್ರಮಗಳನ್ನು ಅನುಸರಿಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
” ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿದೆ. ಇಲಾಖೆಗೆ ಸಂಬಂಧಪಟ್ಟಂತೆ ಆಗಾಗ್ಗೆ ಸೂಚನೆಗಳನ್ನು ನೀಡಲಾಗುತ್ತಿರುತ್ತದೆ. ಅದೇ ರೀತಿ ಗಣರಾಜ್ಯೋತ್ಸವಕ್ಕೆ ಸಂಬಂಧಪಟ್ಟಂತೆ ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಪಾಲನೆ ಮಾಡಲಾಗುತ್ತದೆ.”– ಸಿ.ಎಚ್ ಪ್ರತಾಪ್ ರೆಡ್ಡಿ, ಎಡಿಜಿಪಿ, ಕಾನೂನು ಸುವ್ಯವಸ್ಥೆ ವಿಭಾಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.