ಟಿಪ್ಪು ಸುಲ್ತಾನ್ ಜಾತ್ಯತೀತ ರಾಜ: ಸಿದ್ದರಾಮಯ್ಯ
ಆರೆಸ್ಸೆಸ್ ವಿರೋಧಕ್ಕೆ "ಡೋಂಟ್ ಕೇರ್' ಎಂದ ಮಾಜಿ ಸಿಎಂ
Team Udayavani, Nov 11, 2021, 6:29 AM IST
ಬೆಂಗಳೂರು: ಟಿಪ್ಪು ಸುಲ್ತಾನ್ ಜಾತ್ಯತೀತ ರಾಜ ಮತ್ತು ಜನನಾಯಕ. ಮತಾಂಧತೆ ಕಾರಣದಿಂದ ಆರೆಸ್ಸೆಸ್ ಟಿಪ್ಪುವನ್ನು ವಿರೋಧಿಸುತ್ತದೆ. ಇದಕ್ಕೆ “ಡೋಂಟ್ ಕೇರ್’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಟಿಪ್ಪು ಜಯಂತಿ ಪ್ರಯುಕ್ತ ಶುಭಕೋರಲು ಮಾಜಿ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತಮ್ಮ ನಿವಾಸಕ್ಕೆ ಮುಸ್ಲಿಂ ಮುಖಂಡರು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರಿಟಿಷರ ನಿದ್ದೆಗೆಡಿಸಿದ್ದ ಟಿಪ್ಪು ಆಸ್ಥಾನದಲ್ಲಿ ದಿವಾನ ಹಾಗೂ ಮಂತ್ರಿಗಳಾಗಿದ್ದವರು ಹಿಂದೂಗಳೇ ಆಗಿದ್ದರು ಎಂದರು.
“ಉಳುವವನೇ ಭೂ ಒಡೆಯ’ ಕಾನೂನನ್ನು ಮೊದಲಿಗೆ ಜಾರಿಗೆ ತಂದಿದ್ದು ಹೈದರಲಿ. ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು. ಶೃಂಗೇರಿ ಸೇರಿ ಹಲವು ಮಠ, ಮಂದಿರಗಳಿಗೆ ಟಿಪ್ಪು ರಕ್ಷಣೆ, ನೆರವು ನೀಡಿರುವುದಕ್ಕೆ ಅಪಾರ ದಾಖಲೆಗಳಿವೆ ಎಂದು ಹೇಳಿದರು.
ಟಿಪ್ಪು ಎಲ್ಲೆಲ್ಲಿ ಮಸೀದಿ ಕಟ್ಟಿಸಿದ್ದರೋ ಅದರ ಪಕ್ಕದಲ್ಲೇ ದೇವಸ್ಥಾನಗಳನ್ನೂ ಕಟ್ಟಿಸುತ್ತಿದ್ದರು ಎನ್ನುವುದಕ್ಕೂ ದಾಖಲೆಗಳಿವೆ. ಧರ್ಮದ ಕಾರಣಕ್ಕೆ ಟಿಪ್ಪುವನ್ನು ವಿರೋಧಿಸುವ ಆರೆಸ್ಸೆಸ್ ಯಾವತ್ತೂ ಬ್ರಿಟಿಷರ ವಿರುದ್ಧ ಹೋರಾಡಿಲ್ಲ ಎಂದರು.
ಇದನ್ನೂ ಓದಿ:ಮೋದಿಗೆ ಕೆಸಿಆರ್ ಸೆಡ್ಡು: ಬಿಜೆಪಿ ಆರೋಪ
ನಮ್ಮ ಸರಕಾರದ ಅವಧಿಯಲ್ಲಿ ಕೆಂಪೇಗೌಡ ಜಯಂತಿ, ಕಿತ್ತೂರು ರಾಣಿ ಚನ್ನಮ್ಮ ಜಯಂತಿ, ಟಿಪ್ಪು ಜಯಂತಿ ಆಚರಣೆ ಆರಂಭಿಸಿದ ಹೆಮ್ಮೆ ನಮ್ಮದು ಎಂದು ಹೇಳಿದರು.
ದಲಿತ ಮುಖ್ಯಮಂತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿ, ದಲಿತರು ಮುಖ್ಯಮಂತ್ರಿಗಳಾಗಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ರಾಜ್ಯದಲ್ಲಿ ಈಗ ಬಿಜೆಪಿಯದೇ ಸರಕಾರ ಇದೆ. ಬೊಮ್ಮಾಯಿ ಅವರನ್ನು ಕೆಳಗಿಳಿಸಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ. ನಮ್ಮ ಸರಕಾರ ಇರುವ ಪಂಜಾಬ್‌ನಲ್ಲಿ ನಾವು ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಬಿಜೆಪಿಯರವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಲು ಅವಕಾಶ ಇದೆ. ಮಾಡಿ ತೋರಿಸಲಿ ಎಂದು ಮರು ಸವಾಲು ಹಾಕಿದರು. ಮಾಜಿ ಸಚಿವರಾದ ಜಮೀರ್ ಅಹಮದ್, ಎಂ.ಬಿ.ಪಾಟೀಲ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹಲವು ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.