ತಿರುಮಕೂಡಲು ಕುಂಭಮೇಳಕ್ಕೆ 4 ದಿನ ಬಾಕಿ, ಭರದ ಸಿದ್ಧತೆ
Team Udayavani, Feb 13, 2019, 1:09 AM IST
ತಿ.ನರಸೀಪುರ: ಕಾವೇರಿ, ಕಪಿಲ ಹಾಗೂ ಗುಪ್ತಗಾಮಿನಿಯಾಗಿ ಹರಿಯುವ ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮವಾದ ತಾಲೂಕಿನ ತಿರುಮಕೂಡಲು ಶ್ರೀಕ್ಷೇತ್ರದಲ್ಲಿ ಫೆ.17ರಿಂದ 3 ದಿನ ನಡೆಯುವ 11ನೇ ಮಹಾ ಕುಂಭಮೇಳಕ್ಕೆ ಭರದ ಸಿದಟಛಿತೆ ನಡೆಯುತ್ತಿದೆ. ಉತ್ಸವದ ಅಂಗವಾಗಿ ನಡೆಯಲಿರುವ ಧಾರ್ಮಿಕ ಪೂಜಾ ಕಾರ್ಯಕ್ರಮಗಳಿಗೆ ನಿಗದಿತ ಸ್ಥಳದಲ್ಲಿ ಶಾಮಿಯಾನ ಅಳವಡಿಸಲು ಕಾಮಗಾರಿ ನಡೆಯುತ್ತಿದೆ. ಪುಣ್ಯ ಸ್ನಾನದ ನಂತರ ಬಟ್ಟೆ ಬದಲಿಸಲು ತಾತ್ಕಾಲಿಕ ಕೊಠಡಿ ನಿರ್ಮಾಣ, ಮಠಾಧೀಶರು ಹಾಗೂ ಯತಿ ವರ್ಯರು ಸ್ನಾನ ಮಾಡುವ ನಿಗದಿತ ಸ್ಥಳದ ಸುತ್ತ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ.
ಸಂಗಮದ ಮಧ್ಯಭಾಗದಲ್ಲಿರುವ ನಡುಹೊಳೆ ಬಸವೇಶ್ವರ ಸ್ವಾಮಿ ದರ್ಶನ ಪಡೆಯಲು ಭಕ್ತರು ಆಗಮಿಸುವ ಹಿನ್ನೆಲೆ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ನದಿಯ ಮೂಲಕ ಹಾದು ಹೋಗಲು ಮರಳಿನ ಮೂಟೆ ಅಳವಡಿಸಿ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದೆ. ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಅಗತ್ಯವಿರುವ ಪೊಲೀಸರಿಗೆ ವಸತಿ ಸೌಲಭ್ಯ, ಅಳವಡಿಸಬೇಕಾದ ಶಾಮಿಯಾನದ ಬಗ್ಗೆ ಸಂಬಂಧಿಸಿದವರ ಜತೆ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.