ಇಂದು ವಿವಿಧೆಡೆ ಪೇಜಾವರ ಶ್ರೀಗಳ ಆರಾಧನೋತ್ಸವ
Team Udayavani, Jan 9, 2020, 3:04 AM IST
ಉಡುಪಿ: ನಾಡಿನ ವಿವಿಧೆಡೆ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವ, ಅನ್ನಸಂತರ್ಪಣೆ ಗುರುವಾರದಂದು ನಡೆಯಲಿದೆ. ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಅನ್ನಸಂತರ್ಪಣೆಯನ್ನು ಏರ್ಪಡಿಸಿದ್ದಾರೆ. ಬೆಳಗ್ಗೆ ವಿಶೇಷ ಪಾರಾಯಣ, ಪೂಜೆಗಳನ್ನು ನಡೆಸಲಾಗುತ್ತದೆ.
ಉಡುಪಿ ಪೇಜಾವರ ಮಠ, ಮಂಗಳೂರು ತಲಪಾಡಿ ಸಮೀಪದ ಕಣ್ವತೀರ್ಥ ಮಠ, ಮಂಗಳೂರು ತಾಲೂಕಿನ ಪೇಜಾವರ ಮೂಲಮಠ, ಮುಚ್ಚಲಕೋಡು ಮತ್ತು ಪೆರ್ಣಂಕಿಲ ದೇವಸ್ಥಾನಗಳಲ್ಲಿ ಪೇಜಾವರ ಮಠದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಉಡುಪಿಯ ವಿದ್ಯೋದಯ ಸಮೂಹ ಸಂಸ್ಥೆ, ಪಾಜಕದ ಆನಂದತೀರ್ಥ ವಿದ್ಯಾಲಯ, ರಾಮಕುಂಜದ ವಿದ್ಯಾಸಂಸ್ಥೆ, ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನ ಮತ್ತು ಉಚಿತ ಹಾಸ್ಟೆಲ್‌ನಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿದೆ.
ಶ್ರೀಗಳನ್ನು ವೃಂದಾವನ ಮಾಡಿದ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ವಿಶೇಷ ಪಾರಾ ಯಣ, ಪೂಜೆಗಳನ್ನು ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಸಲಾಗುತ್ತದೆ. ಬೆಂಗಳೂರು, ಧಾರವಾಡ, ಮೈಸೂರು, ಬೆಳಗಾವಿ, ಚಿಕ್ಕಮಗ ಳೂರು, ಬಳ್ಳಾರಿ ಮೊದಲಾದೆಡೆ ಇರುವ ಮಠದ ನೇರ ಸಂಪರ್ಕದ ಸಂಸ್ಥೆಗಳಲ್ಲಿ, ಚೆನ್ನೈ, ಮುಂಬಯಿ, ದಿಲ್ಲಿ, ನಾಶಿಕ್ ಮೊದಲಾದೆಡೆ ಇರುವ ಶಾಖಾ ಮಠಗಳಲ್ಲಿ ಆರಾಧನೋತ್ಸವದ ಅಂಗವಾಗಿ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಇದಲ್ಲದೆ ಬೆಂಗಳೂರು ಪೀಣ್ಯದಲ್ಲಿರುವ ಪುತ್ತೂರು ಮೂಲದ ಸೌಂದರ್ಯ ಮಂಜಪ್ಪನವರಂತಹ ಗಣ್ಯರು ಅವರವರ ದೇವಸ್ಥಾನ, ಸಂಸ್ಥೆಗಳಲ್ಲಿ ಸಂತರ್ಪಣೆ ಮಾಡು ತ್ತಿದ್ದಾರೆ. ಸ್ಥಳಾಭಾವದಿಂದಾಗಿ ಪೊಲೀಸ್ ಇಲಾಖೆಯ ಸಲಹೆಯಂತೆ ಬೆಂಗಳೂರಿನ ಸಾರ್ವಜನಿಕ ರಿಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜ. 11ರಂದು ಅನ್ನಸಂತರ್ಪಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.