ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ
Team Udayavani, Oct 27, 2021, 6:30 AM IST
ಬೆಂಗಳೂರು: ಹದಿನೈದು ದಿನಗಳಿಂದ ರಾಜ್ಯದ ಗಮನವನ್ನು ತಮ್ಮತ್ತ ಸೆಳೆದಿದ್ದ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ.
ಅ. 13ರಿಂದ ಎಲ್ಲ ಪಕ್ಷಗಳ ಘಟಾನುಘಟಿ ನಾಯಕರು ಈ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಿದ್ದು, ಬುಧವಾರ ಕೊನೆಯ ಕ್ಷಣದಲ್ಲಿ ಜನಮನ ಸೆಳೆಯುವ ಕಸರತ್ತು ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸ ಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರ ಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ದಲ್ಲಿ ಮುಂಚೂಣಿಯಲ್ಲಿದ್ದರು.
ವ್ಯವಸ್ಥಿತ ತಂಡ
ಕಾಂಗ್ರೆಸ್ ಮತ್ತು ಬಿಜೆಪಿ ವ್ಯವಸ್ಥಿತ ಪ್ರಚಾರ ತಂತ್ರ ರೂಪಿಸಿ, ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಉಸ್ತುವಾರಿಗಳ ತಂಡವನ್ನೇ ರಚಿಸಿ ಅಬ್ಬರದ ಪ್ರಚಾರ ನಡೆಸಿವೆ.
ಮುಖ್ಯಮಂತ್ರಿ ಬೊಮ್ಮಾಯಿ ಯವರು ಎರಡೂ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಒಂದು ವಾರ ಬಿಡುವಿಲ್ಲದ ಪ್ರಚಾರ ನಡೆಸಿದರು. ಅವರಿಗೆ ಪೂರಕವಾಗಿ ಮಾಜಿ ಸಿಎಂ ಬಿಎಸ್‌ವೈ ಕೂಡ ಎರಡೂ ಕ್ಷೇತ್ರಗಳಲ್ಲಿ ತಲಾ ಎರಡು ದಿನ ಪ್ರಚಾರ ನಡೆಸಿದ್ದಾರೆ.
ಕಾಂಗ್ರೆಸ್ ಕೂಡ ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ್ದು, ತಳ ಮಟ್ಟದ ಎಲ್ಲ ಮತದಾರರನ್ನು ತಲುಪುವ ಪ್ರಯತ್ನ ನಡೆಸಿದೆ. ವಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡೂ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿದ್ದಾರೆ.
ಇದನ್ನೂ ಓದಿ:ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್ ವಿಜ್ಞಾನಿ ಸಮೀರನ್ ಪಾಂಡಾ ಪ್ರತಿಪಾದನೆ
ಜೆಡಿಎಸ್ ನಾಯಕರು ಹಾನಗಲ್ ಕ್ಷೇತ್ರಕ್ಕಿಂತ ಸಿಂದಗಿಯಲ್ಲಿ ಹೆಚ್ಚಿನ ಶ್ರಮ ಹಾಕಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಿಂದಗಿಯಲ್ಲಿ ಒಂದು ವಾರ ಠಿಕಾಣಿ ಹೂಡಿದ್ದರು. ಅವರಿಗೆ ಬೆಂಬಲವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ನಿಖೀಲ್ ಕುಮಾರಸ್ವಾಮಿ ಸಿಂದಗಿ ಪ್ರಚಾರಕ್ಕೆ ಹೆಚ್ಚಿನ ಸಮಯ ನೀಡಿದ್ದಾರೆ.
ಎರಡೂ ಕ್ಷೇತ್ರಗಳ ಉಪಚುನಾವಣೆಗೆ 15 ದಿನಗಳ ಕಾಲ ನಡೆದ ಪ್ರಚಾರದ ಭರಾಟೆ, ಮಾತಿನ ಸಮರ, ಏಟಿಗೆ ಎದುರೇಟುಗಳಿಗೆ ಬುಧವಾರ ಸಂಜೆ ತೆರೆ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.