![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jan 1, 2018, 10:19 AM IST
ತುಮಕೂರು: ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜವನ್ನು ಸಂಘಟಿಸುವ ಉದ್ದೇಶ
ದಿಂದ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕಳೆದ ನಾಲ್ಕು ವರ್ಷದಿಂದ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ನಡೆಸಿಕೊಂಡು ಬರುತ್ತಿದೆ. ಇದರಂಗವಾಗಿ ನಗರ ಸಮೀಪದ ಕೈದಳದಲ್ಲಿ 5ನೇ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆಯನ್ನು ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯೂ ಜಕಣಾಚಾರಿಯ ಸ್ಮರಣೋತ್ಸವನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ತುಮಕೂರು ಜಿಲ್ಲೆಯ ಕೈದಾಳದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಬಿ.
ಎಸ್.ಯಡಿಯೂರಪ್ಪ ವಹಿಸಲಿದ್ದಾರೆ. ವಿಶ್ವಕರ್ಮ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಕಾಳಹಸ್ತೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ, ಬೋವಿ ಸಮಾಜದ ಪೀಠಾಧ್ಯಕ್ಷರಾದ ಸಿದ್ಧರಾಮೇಶ್ವರ ಸ್ವಾಮೀಜಿ, ಜಿಲ್ಲೆಯ ಶಾಸಕರು, ಮುಖಂಡರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿಂದುಳಿದ ವರ್ಗಗಳ ಸುಮಾರು 25 ಜನ ಪೀಠಾಧಿಪತಿಗಳು ದಿವ್ಯ
ಸಾನ್ನಿಧ್ಯವನ್ನು ವಹಿಸಲಿದ್ದಾರೆ. ಜೊತೆಗೆ, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಸಮಾಜ ಬಾಂಧವರು
ಭಾಗವಹಿಸಲಿದ್ದಾರೆ ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.