ಇಂದು ವಿಶ್ವ ಜನಸಂಖ್ಯೆ ದಿನಾಚರಣೆ: 4 ದಶಕದಲ್ಲಿ ಜನನ ಪ್ರಮಾಣ 2 ಪಟ್ಟು ಇಳಿಕೆ

Team Udayavani, Jul 11, 2022, 6:55 AM IST

ಇಂದು ವಿಶ್ವ ಜನಸಂಖ್ಯೆ ದಿನಾಚರಣೆ: 4 ದಶಕದಲ್ಲಿ ಜನನ ಪ್ರಮಾಣ 2 ಪಟ್ಟು ಇಳಿಕೆ

ಬೆಂಗಳೂರು: ಹಲವು ದಶಕಗಳ ಹಿಂದೆ ಜನಸಂಖ್ಯೆ ನಿಯಂತ್ರಣಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿ ಸಿತ್ತು. ಆದರೆ, ಈಗ ಪರಿಸ್ಥಿತಿ ತದ್ವಿರುದ್ಧವಾಗಿದೆ. ರಾಜ್ಯದಲ್ಲಿ ಜನನ ಪ್ರಮಾಣ ವರ್ಷ ದಿಂದ ವರ್ಷಕ್ಕೆ ಕುಸಿತ ಕಾಣುವ ಮೂಲಕ ಆಂತಕ ಸೃಷ್ಟಿಯಾಗಿದೆ.

ಹಲವು ವರ್ಷಗಳಿಂದ ಪ್ರತಿ ವರ್ಷ ಸರಾಸರಿ 10 ಲಕ್ಷ ಮಕ್ಕಳ ಜನನವಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸುಮಾರು 10,000 ಮಕ್ಕಳ ಜನನ ಸಂಖ್ಯೆ ಕುಸಿತವಾಗುತ್ತಿದೆ. ಇತ್ತೀಚಿನ ದಿನದಲ್ಲಿ ಫ‌ಲವತ್ತತೆ (ಫ‌ರ್ಟಿಲಿಟಿ) ದರ ಕುಸಿತಗೊಳ್ಳುತ್ತಿರುವುದು ಕಾರಣ ಎನ್ನಲಾಗುತ್ತಿದೆ. 20-32 ವರ್ಷದೊಳಗಿನ ಪುರುಷರು ಹಾಗೂ ಮಹಿಳೆಯರು ಸಂತಾ ನೋತ್ಪತ್ತಿಯ ಅವಧಿಯಲ್ಲಿ ಹೊಂದುವ ಶಿಶುಗಳ ಸಂಖ್ಯೆಯೂ ಕಡಿಮೆಯಾಗಿದೆ.

ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಅನ್ವಯ 1981ರಲ್ಲಿ ಫ‌ಲವತ್ತತೆಯ ದರ ಶೇ. 3.6 ಇದ್ದು, 2020ರಲ್ಲಿ ಶೇ. 1.7ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ 5ರ ವರದಿ ಅನ್ವಯ ಫ‌ಲ ವತ್ತತೆ ದರವು ರಾಷ್ಟ್ರೀಯ ಸರಾಸರಿಗಿಂತ ಉತ್ತಮ ವಾಗಿದೆ ಎನ್ನಲಾಗುತ್ತಿದೆ. ಆದರೂ ಕೇಂದ್ರದ ನಾಲ್ಕನೇ ಸಮೀಕ್ಷೆ ವರದಿಗೆ ಹೋಲಿಸಿದರೆ ಈ ಬಾರಿ 0.1ರಷ್ಟು ಇಳಿಕೆಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ 2030ರ ಹೊತ್ತಿಗೆ ಜನನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆಗಳು ವ್ಯಕ್ತವಾಗಿದೆ.

ನಗರದಲ್ಲಿ ಶಿಶು ಮರಣ!
ಜನನ ಸಂಖ್ಯೆ ಇಳಿಕೆ ನಡುವೆ ರಾಜ್ಯದಲ್ಲಿ ಗ್ರಾಮೀಣ ಭಾಗಗಳಿಗೆ ಹೋಲಿಸಿದರೆ, ಆಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ನಗರ ಭಾಗದಲ್ಲಿ ಶಿಶುಗಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ಸಮೀಕ್ಷೆ ಅನ್ವಯ ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಜನನವಾದ 1000 ನವಜಾತ ಶಿಶುಗಳಲ್ಲಿ ಗರಿಷ್ಠ 26 ಶಿಶುಗಳು ಹಾಗೂ ನಗರ ಭಾಗದಲ್ಲಿ 27 ಶಿಶುಗಳ ಸಾವನ್ನಪ್ಪುತ್ತಿವೆ.

ಗಂಡು ಮಗು ಹಂಬಲ
ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಬಹುತೇಕ ದಂಪತಿಗಳು ಗಂಡು ಮಗು ಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದಾರೆ. ಶೇ. 79.3 ಪುರುಷರು ಹಾಗೂ ಶೇ. 73.6ರಷ್ಟು ಮಹಿಳೆಯರು ಗಂಡು ಮಗು ಪಡೆಯಬೇಕು ಎನ್ನುವ ಹಂಬಲವನ್ನು ಹೊಂದಿರುವುದು ವರದಿಯಾಗಿದೆ.

ಜನನ ಪ್ರಮಾಣ ಇಳಿಕೆಗೆ ಕಾರಣ
ರಾಜ್ಯದಲ್ಲಿ ಜನನ ಪ್ರಮಾಣ ಇಳಿಕೆಗೆ ಆರೋಗ್ಯ ಇಲಾಖೆ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳು ಸಹ ಕಾರಣವಾಗಿದೆ. ಇದರ ಜತೆಗೆ ಪ್ರಸ್ತುತ ಹೆಣ್ಣು ಮಕ್ಕಳು ಮದುವೆ ಅವಧಿಯನ್ನು 25ರಿಂದ 32 ವರ್ಷಕ್ಕೆ ಮುಂದೂಡುತ್ತಿರುವುದರಿಂದ ಮಕ್ಕಳಾಗುವ ಪ್ರಮಾಣ ಕುಸಿಯುತ್ತಿರುವುದು, ಒಂದು ಮಗುವಿನ ಸೂತ್ರ ಅಳವಡಿಕೆ ಹಾಗೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡುತ್ತಿರುವುದು ಮಕ್ಕಳ ಜನನ ಇಳಿಕೆಗೆ ಕಾರಣ ಎನ್ನಲಾಗುತ್ತಿದೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.