ಇಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
Team Udayavani, Jun 13, 2019, 3:00 AM IST
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶಿಸಲು ಅಗತ್ಯ ವಾತಾವರಣ ನಿರ್ಮಾಣವಾಗಿದ್ದು, ಗುರುವಾರ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತ ಹಾಗೂ ಮುಂಗಾರು ಮಾರುತಗಳು ಪ್ರಬಲಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಕರಾವಳಿ ಹಾಗೂ ಮಳೆನಾಡು ಭಾಗಗಳಲ್ಲಿ ಮಳೆ ಶುರುವಾಗಿದೆ. ಅಧಿಕೃತವಾಗಿ ಗುರುವಾರ ರಾಜ್ಯಕ್ಕೆ ಕರಾವಳಿ ಮೂಲಕ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೇಂದ್ರದ ವಿಜ್ಞಾನಿ ಸುನೀಲ್ ಗವಾಸ್ಕರ್ ತಿಳಿಸಿದರು.
ಅರಬ್ಬಿ ಸಮುದ್ರದಲ್ಲಿ ವಾಯು ಚಂಡಮಾರುತ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮುಂಗಾರು ರಾಜ್ಯ ಪ್ರವೇಶ ತಡವಾಗಿದೆ. ಇದೀಗ ಮುಂಗಾರು ಪ್ರವೇಶಕ್ಕೆ ಅಗತ್ಯವಾದ ವಾತಾವರಣ ನಿರ್ಮಾಣವಾಗಿದ್ದು, ಗುರುವಾರ ಸಂಜೆ ವೇಳೆಗೆ ರಾಜ್ಯ ಪ್ರವೇಶಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಜತೆಗೆ, ಮೂರು ದಿನಗಳ ಬಳಿಕ ನಗರದಲ್ಲಿ ಮುಂಗಾರು ಮಳೆ ಬಲಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಬುಧವಾರವೂ ಮಳೆಯಾಗಿದ್ದು, ಮುಂದಿನ ಎರಡು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.