BJP Protest: ಇಂದು ಬಿಜೆಪಿಯಿಂದ ವಕ್ಫ್ ಹೋರಾಟ ಕಹಳೆ
ರೈತರಿಗೆ ವಕ್ಫ್ ನೋಟಿಸ್ ವಿರೋಧಿಸಿ ಜಿಲ್ಲೆ , ತಾಲೂಕು ಮಟ್ಟದಲ್ಲಿ ಬಿಜೆಪಿ ಪ್ರತಿಭಟನೆ
Team Udayavani, Nov 4, 2024, 1:30 AM IST
ಬೆಂಗಳೂರು: ವಕ್ಫ್ ಮಂಡಳಿಯ ನೋಟಿಸ್ ವಿರುದ್ಧ ರಾಜ್ಯಾ ದ್ಯಂತ ಸೋಮವಾರ ಹೋರಾಟ ಕ್ಕಿಳಿಯ ಲಿರುವ ವಿಪಕ್ಷ ಬಿಜೆಪಿ ನಾಯಕರು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ವಕ್ಫ್ ಮಂಡಳಿ ಮತ್ತು ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.
ವಿಜಯಪುರ ಜಿಲ್ಲೆಯ ಕೆಲವೆಡೆ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ನೋಟಿಸ್ ಹೋಗಿ ರುವುದು ವಿವಾದಕ್ಕೆ ಕಾರಣ ವಾಗಿದ್ದು, ರಾಜ್ಯದಲ್ಲಿ ಉಪ ಚುನಾವಣೆಯ ಸಂದರ್ಭದಲ್ಲಿ ವಿಪಕ್ಷ ಬಿಜೆಪಿ ಕೈಗೆ ಅಸ್ತ್ರವೊಂದು ಸಿಕ್ಕಂತಾಗಿದೆ.
ಈ ಮಧ್ಯೆ ನೋಟಿಸ್ ಹಿಂಪಡೆ ಯಲು ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಹಲವೆಡೆ ರೈತರ ಪಹಣಿಯಲ್ಲಿ ಇಂದಿಗೂ ವಕ್ಫ್ ಆಸ್ತಿ ಎಂದು ನಮೂ ದಾಗಿದ್ದು, ಇದರಿಂದ ರೈತರು ಆತಂಕ ಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ನೋಟಿಸ್ ಹಿಂಪಡೆದರೆ ಸಾಲದು, ರೈತರ ಪಹಣಿಯಲ್ಲಿ ನಮೂ ದಾಗಿರುವ ವಕ್ಫ್ ಆಸ್ತಿ ಎಂಬುದು ರದ್ದಾಗ ಬೇಕು ಎಂಬ ಆಗ್ರಹದೊಂದಿಗೆ ಹೋರಾಟಕ್ಕಿಳಿಯಲಿದೆ.
“ಲ್ಯಾಂಡ್ ಜೆಹಾದ್’: ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಇಷ್ಟು ದಿನ ಲವ್ ಜೆಹಾದ್ ಬಗ್ಗೆ ಕೇಳಿದ್ದೆವು. ಈಗ ಲ್ಯಾಂಡ್ ಜೆಹಾದ್ ಆರಂಭವಾಗಿದೆ. ಇದಕ್ಕೆ ಸ್ವತಃ ಸಿಎಂ ಅವರೇ ಕುಮ್ಮಕ್ಕು ಕೊಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ವಕ್ಫ್ ಅದಾ ಲತ್ ಆರಂಭಿಸಿದ ಬಳಿಕವೇ ಇದೆಲ್ಲ ಆರಂಭವಾಗಿದೆ. ವಕ್ಫ್ ಕಾಯ್ದೆಗೆ ಕೇಂದ್ರ ಸರಕಾರ ತಿದ್ದುಪಡಿ ತರಲು ಹೊರಟಿರುವ ಈ ಹೊತ್ತಿನಲ್ಲಿ ಇದನ್ನೆಲ್ಲ ಏಕೆ ಮಾಡಬೇಕಿತ್ತು? ಇದರ ಉದ್ದೇಶ ವೇನು? ವಕ್ಫ್ ಆಸ್ತಿ ಹೆಚ್ಚಿಸಿಕೊಳ್ಳುವ ಮೂಲಕ ಲ್ಯಾಂಡ್ ಜೆಹಾದ್ ಇವರ ಉದ್ದೇಶವಾಗಿದ್ದು, ಇದರ ವಿರುದ್ಧ ನಮ್ಮ ಹೋರಾಟ ಎಂದರು.
ರೈತ ರಿಗೆ ಈ ವಿಷಯದಲ್ಲಿ ತೊಂದರೆ ನೀಡುವುದು ಸಲ್ಲದು. ಇಂತಹ ಪ್ರಕರಣ ಗಳು ಪುನರಾವರ್ತನೆ ಆಗ ದಂತೆಯೂ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಉಪಚುನಾವಣೆ ಅಸ್ತ್ರವಾಗಿದ್ದ ವಿವಾದ
ಕೆಲವು ರೈತರಿಗೆ, ವಿಶೇಷವಾಗಿ ಉತ್ತರ ಕರ್ನಾಟಕದ ಭಾಗಗಳಲ್ಲಿ ಇರುವವರಿಗೆ ವಕ್ಫ್ ಆಸ್ತಿ ಎಂಬುದಾಗಿ ನೋಟಿಸ್ ಜಾರಿಯಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದರು. ಈ ವಿಷಯದಲ್ಲಿ ಹೆಚ್ಚು-ಕಡಿಮೆ ಒಂದು ವಾರದಿಂದ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ನಡೆಯುತ್ತಿತ್ತು. ಒಂದೆಡೆ ವಿಪಕ್ಷಗಳು ಸರಕಾರದ ನಡೆಯನ್ನು “ಭೂ ಜೆಹಾದ್’ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿಎಂ-ಡಿಸಿಎಂ, ಉಪಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ಬಿಜೆಪಿಯು ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸಿ ರಾಜಕೀಯ ಮಾಡಲು ಹೊರಟಿದೆ. ಬಿಜೆಪಿ ಅವಧಿಯಲ್ಲೂ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಲಾಗಿತ್ತು ಎಂದು ತಿರುಗೇಟು ನೀಡಿದ್ದರು. ಉಪಚುನಾವಣೆ ಹಿನ್ನೆಲೆಯಲ್ಲಿ ಇದು ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿತ್ತು.
ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕೂಡ ಸಿಎಂ, ವಕ್ಫ್ ವಿಷಯವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆಯೂ ಮನವಿ ಮಾಡಿದರು. ಜತೆಗೆ ಅಪಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.