ಇಂದು, ನಾಳೆ ಕಾಂಗ್ರೆಸ್ ಚಿಂತನ-ಮಂಥನ ಶಿಬಿರ
Team Udayavani, Jun 2, 2022, 12:03 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯ ಕಾರ್ಯತಂತ್ರ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಹೋರಾಟ ಕುರಿತು ರೂಪುರೇಷೆ ಸಿದ್ಧಪಡಿಸಲು ಕಾಂಗ್ರೆಸ್ ಎರಡು ದಿನಗಳ ಕಾಲ ಚಿಂತನ -ಮಂಥನ ಶಿಬಿರ ನಡೆಸಲಿದೆ.
ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಜೂ. 2 ಮತ್ತು 3ರಂದು ಶಿಬಿರ ನಡೆಯಲಿದ್ದು, ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ.
ರಾಜಸ್ಥಾನದ ಉದಯಪುರದ ಚಿಂತನ ಶಿಬಿರದಲ್ಲಿ ಕೈಗೊಂಡ ನಿರ್ಣಯಗಳ ಜಾರಿ ಕುರಿತು ಸಮಾಲೋಚನೆ ನಡೆಸಲಾಗುವುದು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುಜೇìವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಯಲ್ಲಿನ ಟಿಕೆಟ್ ಹಂಚಿಕೆ ಬಗ್ಗೆ ಅಸಮಾಧಾನ ಶಿಬಿರದಲ್ಲಿ ಸ್ಫೋಟವಾಗುವ ಸಾಧ್ಯತೆಯಿದ್ದು, ನಾಯಕರಲ್ಲಿ ಆಯ್ಕೆಯ ಮಾನದಂಡ ಪ್ರಶ್ನಿಸಲು ತಂಡ ಸಜ್ಜಾಗಿದೆ ಎನ್ನಲಾಗಿದೆ.
ಶಿಬಿರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿಚನೇತೃತ್ವದಲ್ಲಿ ಆರ್ಥಿಕ ವ್ಯವಹಾರಗಳ ಸಮಿತಿ, ರೆಹಮಾನ್ ಖಾನ್ ಅಧ್ಯಕ್ಷತೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಮಿತಿ, ಸಂಘಟನೆ ವಿಚಾರದಲ್ಲಿ ಬಿ.ಕೆ.ಹರಿಪ್ರಸಾದ್ ಸಮಿತಿ, ಕೃಷಿ ವಿಚಾರದಲ್ಲಿ ಎಂ.ಬಿ.ಪಾಟೀಲ್ ಸಮಿತಿ ರಚಿಸಲಾಗಿದೆ.
ಡಿಕೆಶಿ ಭೇಟಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ಸಲೀಂ ಆಹಮದ್ ಜತೆಗೂಡಿ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಕೃಷ್ಣ ಬೈರೇಗೌಡ ನೇತೃತ್ವದ ಸಮುದಾಯ, ಮಹಿಳೆಯರು, ಸಿಕ್ಷಣ ಹಾಗೂ ಉದ್ಯೋಗ ಸಮಿತಿಯ ಪದಾಧಿಕಾರಿಗಳ ಜತೆ ಡಿ.ಕೆ. ಶಿವಕುಮಾರ್ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.