ಪ್ರವಾಸೋದ್ಯಮ, ವಾರ್ತಾ, ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಇಲಾಖೆ ವಿಲೀನಕ್ಕೆ ಚಿಂತನೆ
Team Udayavani, Jun 7, 2020, 7:22 AM IST
ಬೆಂಗಳೂರು: ಪ್ರವಾಸೋದ್ಯಮ ಇಲಾಖೆ, ವಾರ್ತಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕ್ರೀಡಾ ಯುವಜನ ಸೇವೆ ಇಲಾಖೆಗಳನ್ನು ವಿಲೀನಗೊ ಳಿಸಿ ಒಂದೇ ಸಚಿವಾಲಯದಡಿ ತರಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಮಾತ ನಾಡಿದ ಅವರು, ವೆಚ್ಚ ಕಡಿಮೆ ಮಾಡುವ ಉದ್ದೇಶ ಹಾಗೂ ಹುದ್ದೆಗಳ ಕಡಿತ ಹಿನ್ನೆಲೆಯಲ್ಲಿ ಇಲಾಖೆಗಳ ವಿಲೀನಕ್ಕೆ ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿಸಿದರು.
ಇದೇ ರೀತಿ ಇತರೆ ಇಲಾಖೆಗಳ ವಿಲೀನಗೊಳಿಸುವ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು ಮುಖ್ಯ ಮಂತ್ರಿಯವರ ಜತೆ ಚರ್ಚಿಸಿ ನಾಲ್ಕು ಇಲಾಖೆಗಳ ವಿಲೀನ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಜುಲೈ ಎರಡನೇ ವಾರದಲ್ಲಿ ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು. ಅಗತ್ಯವಿರುವ ಪ್ರವಾಸೋದ್ಯಮ ತಾಣಗಳಲ್ಲಿ ಹೋಟೆಲ್ ನಿರ್ಮಿಸಿದರೆ ಸಬ್ಸಿಡಿ ನೀಡುವುದು ಇದರಲ್ಲಿ ಸೇರಿದೆ ಎಂದು ಹೇಳಿದರು. ಇತರೆ ಭಾಷೆಗಳ ಚಿತ್ರಗಳ ಚಿತ್ರೀಕರಣಕ್ಕೆ ರಾಜ್ಯದಲ್ಲಿ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.
ಇದರಿಂದ ಪ್ರವಾಸೋದ್ಯಮ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು. ಕೊಪ್ಪಳ ಸಮೀಪದ ಬಹದ್ದೂರ ಬಾಂಡ ಗ್ರಾಮದಲ್ಲಿ ಬಂಜಾರ ಹೆರಿಟೇಜ್ ವಿಲೇಜ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಬಂಜಾರ ಅಭಿವೃದಿ ನಿಗಮ ಮತ್ತು ಕೆಎಸ್‌ಟಿಡಿಸಿ ಸಹಯೋಗದಲ್ಲಿ ಯೋಜನೆ ಸಾಕಾರವಾಗಲಿದೆ. ಜತೆಗೆ ಆದಿವಾಸಿ ಕಲ್ಚರಲ್ ಹೆರಿಟೇಜ್ ಸಹ ರಾಮನಗರದ ಜಾನಪದ ಲೋಕದಲ್ಲಿ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.