ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್.ಕೆ. ಪಾಟೀಲ್
ದಕ್ಷಿಣ ಭಾರತ ಉತ್ಸವದಲ್ಲಿ 4,200 ಕೋ.ರೂ.ಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಮೆಚ್ಚುಗೆ
Team Udayavani, Jun 17, 2024, 12:20 AM IST
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ “ಶಕ್ತಿ’ ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ. 50ರಷ್ಟು ಹೆಚ್ಚಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಭಾನುವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಅವರು, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವ್ಯಾಪಕ ಅವಕಾಶವಿದೆ ಎಂದು ಸಚಿವರು ಹೇಳಿದರು.
ಪ್ರವಾಸಿ ಕ್ಷೇತ್ರಗಳ ಮೂಲಭೂತ ಸೌಕರ್ಯ ಗಳನ್ನು ಹೆಚ್ಚಿಸುವುದು ಕೇವಲ ಸರಕಾರದಿಂದ ಸಾಧ್ಯವಿಲ್ಲ. ಈ ಕ್ಷೇತ್ರಗಳಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಇಲ್ಲಿನ ಹೂಡಿಕೆಯಿಂದ ಬಹಳಷ್ಟು ಉಪಯೋಗ ವನ್ನು ಉದ್ದಿಮೆದಾರರು ಪಡೆದು ಕೊಳ್ಳಬಹುದಾಗಿದೆ. ಪ್ರವಾಸೋದ್ಯಮ ಎಂದರೆ ಕೇವಲ ಲಕ್ಸುರಿ ಪ್ರವಾಸೋದ್ಯಮ ಅಲ್ಲ, ಸಾಮಾನ್ಯ ಜನರ ಪ್ರವಾಸೋದ್ಯಮಕ್ಕೂ ಸರ ಕಾರ ಆದ್ಯತೆ ನೀಡುತ್ತದೆ. ಈ ಉತ್ಸವದ ಮೂಲಕ ದಕ್ಷಿಣ ಭಾರತ ರಾಜ್ಯಗಳ ಐತಿಹಾಸಿಕ, ಪಾರಂಪರಿಕ, ಸ್ಮಾರಕ ಸಂಪನ್ಮೂಲಗಳಲ್ಲಿನ ಅವಕಾಶ ಗಳನ್ನು ತೋರಿಸುವ ವೇದಿಕೆಯನ್ನು ನೀಡಲಾಗಿದೆ ಎಂದರು.
ವಿಪುಲ ಅವಕಾಶ
ದಕ್ಷಿಣ ಭಾರತ ರಾಜ್ಯಗಳಲ್ಲಿ ಪ್ರವಾಸೋ ದ್ಯಮ ಕ್ಷೇತ್ರದ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಅವುಗಳಲ್ಲಿ ಹೂಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಎಫ್‌ಕೆಸಿಸಿಐ ಆಯೋಜಿಸಿರುವ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಈ ಉತ್ಸವದ ಮೂಲಕ 4,200 ಕೋಟಿ ರೂ.ಗಳಷ್ಟು ಹೂಡಿಕೆಯ ಪ್ರಸ್ತಾವನೆಗಳಿಗೆ ಒಡಂಬಡಿಕೆ ಆಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಫ್‌ಕೆಸಿಸಿಐ ಪದಾಧಿಕಾರಿಗಳ ಕಾರ್ಯ ಅಭಿನಂದನೆಗೆ ಅರ್ಹ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಹೂಡಿಕೆಗೆ ಪ್ರೋತ್ಸಾಹ
ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ದಕ್ಷಿಣ ಭಾರತ ರಾಜ್ಯಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಪ್ರಯತ್ನಕ್ಕೆ ಯಶಸ್ಸು ದೊರೆತಿದೆ. ಕೈಗಾರಿಕಾ ಉತ್ಪಾದನೆ, ಕೃಷಿಯ ಅನಂತರ ಹೆಚ್ಚಿನ ಉದ್ಯೋಗಾವಕಾಶ ಮತ್ತು ಹೂಡಿಕೆಯ ಅವಕಾಶ ಇರುವುದು ಪ್ರವಾಸೋದ್ಯಮ ಕ್ಷೇತ್ರದಲ್ಲಿ. ಈ ಉತ್ಸವದ ಮೂಲಕ ಎಫ್‌ಕೆಸಿಸಿಐ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಉದ್ದಿಮೆದಾರರನ್ನು ಪ್ರೋತ್ಸಾಹಿಸಿದೆ. ಮುಂದಿನ ದಿನಗಳಲ್ಲೂ ಎಫ್‌ಕೆಸಿಸಿಐ ವತಿಯಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಲಾಗುವುದು ಎಂದರು.
ರಾಜ್ಯಪಾಲರಿಂದ ಒಡಂಬಡಿಕೆ ಪತ್ರ ವಿತರಣೆ
ಕಾರ್ಯಕ್ರಮದಲ್ಲಿ ಬಂಡವಾಳ ಹೂಡಿಕೆಗೆ ಮುಂದಾದ ಕೆಲವು ಉದ್ದಿಮೆದಾರರಿಗೆ ಒಡಂಬಡಿಕೆಯ ಪತ್ರಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೊÉàಟ್ ಹಾಗೂ ಪ್ರವಾಸೋದ್ಯಮ ಸಚಿವ ಡಾ| ಎಚ್.ಕೆ ಪಾಟೀಲ್ ವಿತರಿಸಿದರು. ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ| ವಿ. ರಾಮ್ ಮನೋಹರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.