ಶಿರಾಡಿಘಾಟ್‌ನಲ್ಲಿ ಮಣ್ಣು ಕುಸಿತ
ಕಾರವಾರ-ಬೆಂಗಳೂರು ರೈಲು ಸಂಚಾರದಲ್ಲಿ ವಿಳಂಬ
Team Udayavani, Jul 5, 2019, 5:21 AM IST
ಬೆಂಗಳೂರು: ಗುರುವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾ ವಳಿಯ ಬಹುತೇಕ ಕಡೆ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ.ಮಳೆಯಾಗಿದೆ.
ಈ ಮಧ್ಯೆ, ಸಕಲೇಶಪುರ ಬಳಿ ಶಿರಾಡಿಘಾಟ್‌ನ ಶಿರಿವಾಗಿಲು ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿಯ ಮೇಲೆ ಗುರುವಾರ ಮಧ್ಯಾಹ್ನ ಸಸ1 ಗಂಟೆಯ ವೇಳೆಗೆ ಗುಡ್ಡ ಕುಸಿದು ರೈಲ್ವೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದರಿಂದಾಗಿ ಕಾರವಾರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ರೈಲಿನ ಸಂಚಾರವನ್ನು ಮಾರ್ಗ ಮಧ್ಯೆ ತಡೆ ಹಿಡಿಯಲಾಗಿತ್ತು. ಬಳಿಕ, ರೈಲ್ವೆ ಸಿಬ್ಬಂದಿ ಆಗಮಿಸಿ, ಮಣ್ಣು ತೆರವುಗೊಳಿಸಿ ಸಂಜೆ 5 ಗಂಟೆಗೆ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಇದರಿಂದಾಗಿ ರೈಲು ಬೆಂಗಳೂರು ತಲುಪುವುದು ಸುಮಾರು 2 ಗಂಟೆ ತಡವಾಯಿತು.
ಈ ಮಧ್ಯೆ, ಶನಿವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ಪಶ್ಚಿಮ ಕರಾವಳಿಯಲ್ಲಿ ಜು.5, ಶುಕ್ರವಾರ ಮಧ್ಯರಾತ್ರಿಯವರೆಗೆ ಉಬ್ಬರದಲೆಗಳು ಉಂಟಾಗುವ ಸಂಭವವಿದ್ದು, ತೀರ ಪ್ರದೇಶದ ಜನರು ಎಚ್ಚರಿಕೆ ವಹಿಸಬೇಕು. ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಜು.8ರ ವರೆಗೂ ಬೀಸಲಿದ್ದು, ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.