ಬಿಎಸ್ವೈಯಿಂದ ವರ್ಗಾವಣೆ ದಂಧೆ: ತಂಗಡಗಿ ಆರೋಪ
Team Udayavani, Aug 5, 2019, 3:00 AM IST
ಗಂಗಾವತಿ: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ ವಾರ ಕಳೆದರೂ ಸಚಿವ ಸಂಪುಟ ರಚಿಸದೆ ವರ್ಗಾವಣೆ ದಂಧೆ ನಡೆಸಿದ್ದಾರೆಂದು ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೇ ಕೋಮಿನ ಅ ಧಿಕಾರಿಗಳನ್ನು ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗುತ್ತಿದೆ.
ಪ್ರತಿದಿನ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗ ಮಾಡುವ ಮೂಲಕ ರಾಜಕೀಯ ಅಸ್ಥಿರತೆಯುಂಟು ಮಾಡಲಾಗಿದೆ. ಅಲೋಕ ಕುಮಾರ್ ಅವರನ್ನು ವರ್ಗಾವಣೆ ಮಾಡುವ ಮೂಲಕ ಸೇಡಿನ ರಾಜಕಾರಣಕ್ಕೆ ಯಡಿಯೂರಪ್ಪ ಕೈ ಹಾಕಿದ್ದಾರೆ ಎಂದರು. ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ ಉಂಟಾಗಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ.
ಜನರು ತೀವ್ರ ಸಂಕಷ್ಟದಲ್ಲಿದ್ದು ಕೂಡಲೇ ಸಚಿವರನ್ನು ಆಯ್ಕೆ ಮಾಡಿ ಜಿಲ್ಲೆಯ ಜವಾಬ್ದಾರಿ ನೀಡದೆ ಯಡಿಯೂರಪ್ಪ ವರ್ಗಾವಣೆಯಲ್ಲಿ ನಿರತರಾಗಿದ್ದಾರೆ. ಟಿಪ್ಪುಜಯಂತಿ ರದ್ದು ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. 6 ತಿಂಗಳ ನಂತರ ಬಿಜೆಪಿ ಸರ್ಕಾರ ಪತನವಾಗಲಿದೆ. ಅನರ್ಹ ಶಾಸಕರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಪಕ್ಷದ ಹೈಕಮಾಂಡ್ ಶೀಘ್ರವೇ ನೇಮಕ ಮಾಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.