ಪೊಲೀಸ್ ಜೀಪ್‌ನಲ್ಲಿ ಹಣ ಸಾಗಣೆ: ಅಧಿಕಾರಿ ವರದಿ
Team Udayavani, Apr 26, 2019, 6:15 AM IST
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಅಕ್ರಮಗಳ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು.
ಗುರುವಾರ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಹಾಸನದಲ್ಲಿ ಪೊಲೀಸ್ ಜೀಪ್‌ನಲ್ಲಿ ಹಣ ಸಾಗಿಸಿರುವ ಬಗ್ಗೆ ಐಎಎಸ್ ಅಧಿಕಾರಿಯೇ ವರದಿ ನೀಡಿದ್ದಾರೆ. ಅದು ಬಿಜೆಪಿ ನೀಡಿದ ದೂರಲ್ಲ. ಬಿಜೆಪಿ ಈ ಹಿಂದೆ ದೂರು ನೀಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಆದರೆ ಹಾಸನದಲ್ಲಿ ಚುನಾವಣಾ ಅಕ್ರಮ ನಡೆದಿದ್ದು, ಪೊಲೀಸ್ ಜೀಪ್‌ನಲ್ಲಿ ಹಣ ಸಾಗಿಸಲಾಗಿದೆ ಎಂದು ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ವರದಿ ನೀಡಿದ್ದಾರೆ. ಚುನಾವಣಾ ಅಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೆ ದನಿಗೂಡಿಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಖ್ಯಮಂತ್ರಿಗಳ ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ಪಡೆ ವಾಹನದಲ್ಲೇ ಹಣ ಸಾಗಣೆಯಾಗಿದೆ. ಆ ಹಣವನ್ನು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟು ಉಳಿದವರಿಗೆ ಸಾಗಿಸಲು ಸಾಧ್ಯವೇ ಇಲ್ಲ. ಆ ಹಣವನ್ನು ಅವರೇ ಸಾಗಿಸಿರಬಹುದು ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.