ನಾರಾಯಣ ಗುರು ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ: ಸುನೀಲ್ ಕುಮಾರ್ ಒತ್ತಾಯ
Team Udayavani, Jul 11, 2022, 1:10 PM IST
ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಕನ್ನಡದ ಬದಲು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವಂತೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರು ಶಿಕ್ಷಣ ಸಚಿವರಿಗೆ ಒತ್ತಾಯಿಸಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿರುವ ಅವರು ಈ ಮನವಿ ಸಲ್ಲಿಸಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ನಾರಾಯಣಗುರು ಪಠ್ಯವನ್ನು ಸಮಾಜ ವಿಜ್ಞಾನದಿಂದ ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಇದರಿಂದ ಕನ್ನಡ ಭಾಷೆಯನ್ನು ಐಚ್ಛಿಕವಾಗಿ ತೆಗದುಕೊಳ್ಳದ ವಿದ್ಯಾರ್ಥಿಗಳಿಗೆ ನಾರಾಯಣ ಗುರುಗಳ ಬಗ್ಗೆ ತಿಳಿದು ಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಈ ಪಠ್ಯವನ್ನು ಕನ್ನಡದಿಂದ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ: ಬಿಜೆಪಿ ಕುಟುಕು
ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಶಿಕ್ಷಣ ಸಚಿವರಾದ ಶ್ರೀ ಬಿಸಿ ನಾಗೇಶ್ ರವರನ್ನು ಭೇಟಿ ಮಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ ಮನವಿ ಮಾಡಲಾಯಿತು. @BCNagesh_bjp @BSBommai @nalinkateel pic.twitter.com/CtHzuZprUG
— Sunil Kumar Karkala (@karkalasunil) July 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.