![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Mar 18, 2024, 12:11 AM IST
ಬೆಂಗಳೂರು: 2023-24ರ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಶಾಲಾ ಆಡಳಿತ ಮಂಡಳಿಗಳು ತಮ್ಮ ಆಧೀನದಲ್ಲಿ ನಡೆಯು ತ್ತಿರುವ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು, ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.
ಆಡಳಿತ ಮಂಡಳಿಗಳು ವರ್ಗಾವಣೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಎ.30 ಕೊನೆಯ ದಿನ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಸ್ತಾವನೆಯನ್ನು ಪರಿಶೀಲಿಸಿ ಉಪನಿರ್ದೇಶಕರಿಗೆ ಸಲ್ಲಿಸಲು ಮೇ 9ರ ವರೆಗೆ ಅವಕಾಶ ಇದೆ. ಉಪ ನಿರ್ದೇಶಕರು ಸೂಕ್ತ ಶಿಫಾರಸಿನೊಂದಿಗೆ ಆಯಾ ವಲಯದ ನಿರ್ದೇಶಕರಿಗೆ ಸಲ್ಲಿಸಲು ಮೇ 20ರವರೆಗೆ, ಅಂತರ ವಿಭಾಗದ ವರ್ಗಾವಣೆ ಕೋರಿ ಬಂದ ಪ್ರಸ್ತಾವನೆಗಳನ್ನು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಲ್ಲಿಸಲು ಎ. 20ರಿಂದ ಮೇ 5ರ ವರೆಗೆ ಮತ್ತು ವರ್ಗಾವಣೆ ಪ್ರಸ್ತಾವ ಇತ್ಯರ್ಥಕ್ಕೆ ಜೂ. 10 ರಿಂದ 20ರ ವರಗೆ ಅವಕಾಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ತಿಳಿಸಿದ್ದಾರೆ.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.