ಸಾರಿಗೆ ನೌಕರರಿಗೆ ಸಿಹಿ ಸುದ್ದಿ?
Team Udayavani, Sep 14, 2021, 6:28 AM IST
ಬೆಂಗಳೂರು: ಸಾರಿಗೆ ಮುಷ್ಕರದಿಂದ ಅಮಾನತು, ವಜಾ, ವರ್ಗಾವಣೆ ಮುಂತಾದವುಗಳಿಂದ ಅತಂತ್ರರಾಗಿರುವ ಸಾವಿರಾರು ನೌಕರರ ಬಗ್ಗೆ ಸಹಾನುಭೂತಿ ತೋರಿರುವ ಸರಕಾರ, ಶೀಘ್ರದಲ್ಲೇ ಈ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.
ಸಾರಿಗೆ ನೌಕರರ ಹಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಚರ್ಚೆ ನಡೆಸಿ, ಮಾಹಿತಿ ಕಲೆಹಾಕಿದರು. ಈ ಸಂದರ್ಭದಲ್ಲಿ ನೌಕರರ ಅಮಾನತು, ವಜಾ ಬಗ್ಗೆಯೂ ಪ್ರಸ್ತಾಪವಾಗಿದ್ದು, ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, “ಸಾರಿಗೆ ಇಲಾಖೆ ನೌಕರರ ಹಿತಕ್ಕೆ ನಮ್ಮ ಸರಕಾರ ಬದ್ಧವಾಗಿದ್ದು, ಸೋಮವಾರ ನಮ್ಮ ಎಲ್ಲ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ನಮ್ಮ ನೌಕರ-ಸಿಬಂದಿ ವರ್ಗದವರ ಹಿತದೃಷ್ಟಿಯಿಂದ ಮಹತ್ವದ ಸಭೆ ನಡೆಸಿದ್ದೇನೆ. ಅತಿ ಶೀಘ್ರದಲ್ಲಿ ಮಹತ್ವದ ನಿರ್ಧಾರಕ್ಕೆ ಬರಲಿದ್ದೇವೆ’ ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.