ಸಾರಿಗೆ ಸಚಿವರ ಸಭೆ: ಖಾಸಗಿ ಸಾರಿಗೆ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್‌

Team Udayavani, Jul 25, 2023, 7:42 AM IST

ಸಾರಿಗೆ ಸಚಿವರ ಸಭೆ: ಖಾಸಗಿ ಸಾರಿಗೆ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್‌

ಬೆಂಗಳೂರು: “ಶಕ್ತಿ’ ಯೋಜನೆಯಿಂದಾಗುತ್ತಿರುವ ನಷ್ಟ ಭರಿಸಿಕೊಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 27ರಂದು ಕರೆ ನೀಡಿದ್ದ ಖಾಸಗಿ ಬಸ್‌, ಆಟೋ, ಟ್ಯಾಕ್ಸಿ ಸೇವೆಗಳ ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದಿರುವ ಖಾಸಗಿ ವಾಹನ ಚಾಲಕರು ಮತ್ತು ಮಾಲಿಕರು, ಸರ್ಕಾರಕ್ಕೆ ಆಗಸ್ಟ್‌ 10ರ ಗಡುವು ನೀಡಿದ್ದಾರೆ.

20ಕ್ಕೂ ಅಧಿಕ ಸಂಘಟನೆಗಳು ಅಂದು (ಜು. 27) ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸೋಮವಾರ ಶಾಂತಿನಗರದಲ್ಲಿರುವ ಸಾರಿಗೆ ಇಲಾಖೆಯಲ್ಲಿ ಇಡೀ ದಿನ ಸರಣಿ ಸಭೆಗಳು ನಡೆದವು. ರಾಜ್ಯ ಖಾಸಗಿ ಸಾರಿಗೆ ಒಕ್ಕೂಟಗಳ ಫೆಡರೇಷನ್‌, ಆಟೋ, ಟ್ಯಾಕ್ಸಿ ಚಾಲಕರು ಮತ್ತು ಮಾಲಿಕರ ಸಂಘಗಳ ಪದಾಧಿಕಾರಿಗಳು, ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಹಲವು ರೀತಿಯ ಮನವೊಲಿಕೆ ಯತ್ನಗಳು ನಡೆದವು. ಅಂತಿಮವಾಗಿ ಆ.10ರವರೆಗೆ ಕಾಲಾವಕಾಶ ನೀಡುವಂತೆ ಸಚಿವರು ಸೂಚಿಸಿದರು. ಇದಕ್ಕೆ ಸಮ್ಮತಿ ಸೂಚಿಸಿದ ಚಾಲಕರು ಮತ್ತು ಮಾಲಿಕರು, ನಿಗದಿತ ಗಡುವಿನೊಳಗೆ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ಇದರೊಂದಿಗೆ 27ರಂದು ನಡೆಯಬೇಕಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ.

ಮಹಿಳೆಯರಿಗೆ “ಶಕ್ತಿ’ ಯೋಜನೆ ಅಡಿ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಖಾಸಗಿ ಬಸ್‌ ಮಾಲಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಇದನ್ನು ಅವಲಂಬಿಸಿದ ಚಾಲಕರು ಮತ್ತು ನಿರ್ವಾಹಕರ ಹಾಗೂ ಅವಲಂಬಿತ ಕುಟುಂಬಗಳ ಜೀವನ ನಿರ್ವಹಣೆ ಕೂಡ ಕಷ್ಟ ಆಗುತ್ತಿದೆ. ಆದ್ದರಿಂದ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು. ಇದು ಸಾಧ್ಯವಿಲ್ಲ ಎಂದಾದರೆ ಮೋಟಾರು ವಾಹನ ತೆರಿಗೆ ಸೇರಿದಂತೆ ಎಲ್ಲ ರೀತಿಯ ತೆರಿಗೆಗಳಿಂದ ಮುಕ್ತಗೊಳಿಸಬೇಕು ಎಂದು ಖಾಸಗಿ ಸಾರಿಗೆ ಒಕ್ಕೂಟಗಳ ಪದಾಧಿಕಾರಿಗಳು ಒತ್ತಾಯಿಸಿದರು.

ಅದೇ ರೀತಿ, ನಗರದಲ್ಲಿ ಇ-ಟ್ಯಾಕ್ಸಿ, ರ್ಯಾಪಿಡೊ ಬೈಕ್‌ ಸೇರಿದಂತೆ ವಿವಿಧ ಪ್ರಕಾರದ ಸೇವೆಗಳಿಂದ ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಈ ಮಧ್ಯೆ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ನೀಡುತ್ತಿರುವುದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ್ದರಿಂದ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ರೂಪದಲ್ಲಿ ನೀಡಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳನ್ನು ಸುದೀರ್ಘ‌ವಾಗಿ ಆಲಿಸಿದ ಸಚಿವ ರಾಮಲಿಂಗಾರೆಡ್ಡಿ, “ಖಾಸಗಿ ಬಸ್‌, ಆಟೋ, ಟ್ಯಾಕ್ಸಿ ಚಾಲಕರು ಮತ್ತು ಮಾಲಿಕರ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ. ಈ ಸಂಬಂಧ ಆಗಸ್ಟ್‌ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಹಾಗಾಗಿ, ಮುಷ್ಕರದ ನಿರ್ಧಾರದಿಂದ ಹಿಂದೆಸರಿಯುವಂತೆ’ ಮನವಿ ಮಾಡಿದರು. ಆಗ ಪದಾಧಿಕಾರಿಗಳು ಆಗಸ್ಟ್‌ 10ರವರೆಗೆ ಗಡುವು ನೀಡಿ ಹಿಂಪಡೆದರು.

ಸಾರಿಗೆ ಇಲಾಖೆ ಆಯುಕ್ತ ಯೋಗೇಶ್‌, ಹೆಚ್ಚುವರಿ ಆಯುಕ್ತರಾದ ಜ್ಞಾನೇಂದ್ರ ಕುಮಾರ್‌, ಸಿ. ಮಲ್ಲಿಕಾರ್ಜುನ, ಉಮಾಶಂಕರ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.