ಚಿಕಿತ್ಸೆ ದರ: ಸಂಪುಟದಲ್ಲಿ ಚರ್ಚಿಸಿ ನಿರ್ಧಾರ


Team Udayavani, Jun 19, 2020, 6:38 AM IST

ramulu rate

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ 19 ಚಿಕಿತ್ಸೆ ಸಂಬಂಧ ದರಪಟ್ಟಿ ಸಿದ್ಧಗೊಂಡಿದ್ದು ಸಚಿವ ಸಂಪುಟದಲ್ಲಿ ಚರ್ಚಿಸಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ಗುರುವಾರ ನಡೆದ ಕೋವಿಡ್‌ ಕಾರ್ಯಪಡೆ  ಸಭೆಯಲ್ಲಿ ಕೋವಿಡ್‌ 19 ಸೋಂಕಿತರಿಗೆ ಚಿಕಿತ್ಸೆ ಸಂಬಂಧ ಸರ್ಕಾರವೇ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಿದರೆ ಎಷ್ಟು ದರ ಪಾವತಿಸಬೇಕು.

ಸಾರ್ವಜನಿಕರು ಸ್ವಯಂ ಇಚ್ಛೆಯಿಂದ ಖಾಸಗಿ ಆಸತ್ರೆಗಳಲ್ಲಿ  ಕೋವಿಡ್‌ 19 ಚಿಕಿತ್ಸೆ  ಪಡೆಬಯಸಿದರೆ ಎಷ್ಟು ದರ ನಿಗಮಾಡಬೇಕು ಎಂಬ ಬಗ್ಗೆ ಚರ್ಚೆಯಾಗಿ ದರಪಟ್ಟಿ ಸಿದ್ಧಪಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಬಡವರಿಗೆ ಅಲ್ಲಿ ಚಿಕಿತ್ಸೆ ನೀಡಲು ಅವಕಾಶ ಇಲ್ಲದಿದ್ದರೆ ಸರ್ಕಾರವೇ ಖಾಸಗಿ  ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಶಿಫಾರಸು ಮಾಡಲಿದ್ದು, ದಿನಕ್ಕೆ ಜನರಲ್‌ ವಾರ್ಡ್‌ನಲ್ಲಿ 5200 ರೂ., ಆಕ್ಸಿಜನ್‌ ಜತೆ ಹಾಸಿಗೆಗೆ 7500 ರೂ., ರೆಸ್ಪಿರೇಟರ್‌ ಸಹಿತ ಚಿಕಿತ್ಸೆಗೆ 8500 ರೂ., ಐಸಿಯು ಚಿಕಿತ್ಸೆಗೆ 12000 ಸಾವಿರ ರೂ. ನಿಗದಿಪಡಿಸಲಾಗಿದೆ.

ಈ  ಹಣ  ಸರ್ಕಾರವೇ ಖಾಸಗಿ ಆಸ್ಪತ್ರೆಗಳಿಗೆ ಪಾವತಿಸುವುದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಉದಾಹರಣೆಗೆ 100 ಹಾಸಿಗೆ ಇದ್ದರೆ ಶೇ.50 ಕೋವಿಡ್‌ ಹಾಸಿಗೆ ಕೋವಿಡ್‌ ಚಿಕಿತ್ಸೆಗೆ ಮೀಸಲಿಡಬೇಕಾ ಗುತ್ತದೆ ಎಂದು ಹೇಳಲಾಗಿದೆ. ಇದೇ ರೀತಿ  ಸಾರ್ವಜನಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸ್ವಯಂ ಇಚ್ಛೆಯಿಂದ ದಾಖಲಾದರೆ ಎಷ್ಟು ದರ ಪಡೆಯಬೇಕು ಎಂಬ ಬಗ್ಗೆಯೂ ದರ ಪಟ್ಟಿ ಸಿದ್ಧಪಡಿಸಲಾಯಿತು.

ಆದರೆ, ಆ ಕುರಿತು ಸಂಪುಟದಲ್ಲಿ ಚರ್ಚೆ ನಂತರವಷ್ಟೇ  ಅಂತಿಮಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ 19 ಚಿಕಿತ್ಸೆ ನೀಡಿದರೆ ಎಷ್ಟು ದರ ನಿಗದಿ ಎಂಬ ಬಗ್ಗೆ  ಸಭೆಯಲ್ಲಿ ಚರ್ಚೆಯಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯ ದರ ಇದೆ. ಗುಜರಾತ್‌ನ ದರದ ಬಗ್ಗೆಯೂ ಚರ್ಚೆಯಾಗಿದೆ.

ವೈದ್ಯರ ಸಂಘವೂ ಇಂತಿಷ್ಟೇ ನಿಗದಿ ಮಾಡಿ ಎಂದು ಮನವಿ ಮಾಡಿದೆ. ಅದನ್ನೂ ಪರಿಶೀಲಿಸಿ ಅಂತಿಮವಾಗಿ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದೆಂದರು. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಹಣ ಪಡೆಯಲಾಗುತ್ತಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿ ಅದಕ್ಕೆ ಕಡಿವಾಣ ಹಾಕಲು ನಿಯಂತ್ರಣ ಕ್ರಮ ಕೈಗೊಳ್ಳಲು  ತೀರ್ಮಾನಿಸಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತು ಸ್ಪಷ್ಟತೆ ಸಿಗಲಿದೆ ಎಂದು ತಿಳಿಸಿದರು.

ಕೋವಿಡ್‌ 19 ಚಿಕಿತ್ಸೆ ನೀಡುವ ವೈದ್ಯರು ಹಾಗೂ ನರ್ಸ್‌ಗಳಿಗೆ ಶಿಫ್ಟ್ ಆಧಾರದ ಮೇಲೆ ಕ್ವಾರಂಟೈನ್‌ ಮಾಡಲು ತೀರ್ಮಾನ ಮಾಡಲಾಗಿದೆ. ವಾರದ 7 ದಿನ ಕೆಲಸ ಮಾಡಿದರೆ ಮುಂದಿನ 7 ದಿನ ಕ್ವಾರಂಟೈನ್‌ನಲ್ಲಿ ಇರಬೇಕು.
-ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.