ತುಳು ಅಧಿಕೃತ ರಾಜ್ಯಭಾಷೆ ಘೋಷಣೆಗೆ ಆಗ್ರಹ
Team Udayavani, Feb 18, 2020, 3:05 AM IST
ಮಂಗಳೂರು: ಈಗ ಪ್ರಾರಂಭಗೊಂಡಿರುವ ವಿಧಾನಮಂಡಲ ಅಧಿವೇಶನದಲ್ಲಿ ಗಮನಸೆಳೆಯುವ ಮೂಲಕ ತುಳು ಭಾಷೆಯನ್ನು ಅಧಿಕೃತ ರಾಜ್ಯಭಾಷೆಯಾಗಿ ಮಾಡುವ ಭರವಸೆ ಕಾರ್ಯರೂಪಕ್ಕೆ ತರಬೇಕೆಂದು ಆಗ್ರಹಿಸಿ ಜೈ ತುಳುನಾಡ್ ಸಂಘಟನೆ ಆಶ್ರಯದಲ್ಲಿ ಟ್ವೀಟ್ ತುಳುನಾಡ್ ಅಭಿಯಾನ ಸೋಮವಾರ ಸಂಜೆ 6ರಿಂದ ರಾತ್ರಿ 10ರ ವರೆಗೆ ನಡೆಯಿತು.
#TuluOfficialin KA_KL ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ನಡೆಸಲಾಯಿತು. ತುಳು ಅಧಿಕೃತ ರಾಜ್ಯಭಾಷೆ ಮಾಡಬೇಕೆಂಬ ತುಳುನಾಡಿನ ಕೂಗನ್ನು ಈಗಾಗಲೇ ಇಲ್ಲಿನ ಶಾಸಕರು ಸರ್ಕಾರಕ್ಕೆ ತಲುಪಿಸಿದ್ದಾರೆ. ಫೆ. 18ರಿಂದ ಅಧಿವೇಶನ ಆರಂಭವಾಗುವುದರಿಂದ ಮತ್ತೂಮ್ಮೆ ನೆನಪಿಸುವ ಉದ್ದೇಶದಿಂದ ಹ್ಯಾಶ್‌ಟ್ಯಾಗ್ ಅಭಿಯಾನ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಜೈ ತುಳುನಾಡ್ ಸಂಘಟನೆಯು ಈಗಾಗಲೇ ಹಲವು ಬಾರಿ ಟ್ವೀಟರ್ ಅಭಿಯಾನ ನಡೆಸಿ ಜನಪ್ರತಿನಿಧಿಗಳ ಗಮನ ಸೆಳೆದಿದೆ.
ಸಚಿವರ ಟ್ವೀಟ್: ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆಯಾಗಿ ಘೋಷಿಸಬೇಕೆಂಬ ತುಳುವರ ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗುವುದು. ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಇದು ಸಕಾಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.