ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್,ಪರದಾಟ
Team Udayavani, Nov 2, 2017, 1:00 PM IST
ಬೆಂಗಳೂರು:ರಾಜ್ಯ ಬಿಜೆಪಿಯ “ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಗುರುವಾರ ಚಾಲನೆ ದೊರಕಿದ್ದು, ಸಮಾರಂಭದಿಂದಾಗಿ ತುಮಕೂರು -ಬೆಂಗಳೂರು ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾವಿರಾರು ವಾಹನ ಸವಾರರು ಪರದಾಡಬೇಕಾಯಿತು.
ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸಮಾರಂಭ ನಡೆಯುತ್ತಿದ್ದು ವಿವಿಧ ಜಿಲ್ಲೆಗಳಿಂದ ಸಾವಿರಾರು ಬೈಕ್ಗಳಲ್ಲಿ ಕಾರ್ಯಕರ್ತರು ಆಗಮಿಸಿದ ಹಿನ್ನಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಅಂಬುಲೆನ್ಸ್ಗಳು ಸಂಚಾರ ಸಾಧ್ಯವಾಗದೆ ಪರದಾಡಬೇಕಾಯಿತು.ಕಿಲೋ ಮೀಟರ್ಗಳಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಶಾ ಗೂ ಟ್ರಾಫಿಕ್ ಬಿಸಿ
ಬೆಳಗ್ಗೆ 11 ಗಂಟೆಯಿಂದಕಾರ್ಯಕ್ರಮ ಆರಂಭವಾಗಿದ್ದು,ಅಮಿತ್ ಶಾ ಅವರು ಮಧ್ಯಾಹ್ನ 12ಕ್ಕೆಯಾತ್ರೆಗೆ ಚಾಲನೆ ನೀಡಬೇಕಿತ್ತು. ಆದರೆ ಸಮಯಕ್ಕೆ ಸರಿಯಾಗಿ ಬರಲು ಸಾಧ್ಯವಾಗದ ಕಾರಣ ಕಾರ್ಯಕ್ರಮವನ್ನು ಬಿಜೆಪಿ ನಾಯಕರು ಆರಂಭಿಸಿದರು.
ಅಮಿತ್ ಶಾ ಅವರನ್ನು ಕರೆತರಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಅವರೂ ವಿಮಾನ ನಿಲ್ದಾಣದಲ್ಲಿ ಕಾಯಬೇಕಾಗಿ ಬಂತು ಎಂದು ವರದಿಯಾಗಿದೆ.
ಶಾ ಅವರು ಎಚ್ಎಎಲ್ ವಿಮಾನ ನಿಲ್ದಾಣದಲ್ಲೇ ವಿಶ್ರಾಂತಿ ಪಡೆಯುತ್ತಿದ್ದು 2 ಗಂಟೆಯ ವೇಳೆ ಹೆಲಿಕ್ಯಾಪ್ಟರ್ ಮೂಲಕ ಸಮಾವೇಶ ಸ್ಥಳಕ್ಕೆ ಆಗಮಿಸಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.