Statement: ಡಿಕೆಸು ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಅಹಿಂದ ಟೀಂ ಕಾರಣ: ಬಿ.ಸುರೇಶ್ ಗೌಡ
Team Udayavani, Jun 8, 2024, 9:09 PM IST
ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸೋಲಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆ್ಯಂಡ್ ಟೀಂ ಕಾರಣ. ಕಾಂಗ್ರೆಸ್‌ನವರ ಒಳಜಗಳದಿಂದ ಇನ್ನು 6 ತಿಂಗಳಲ್ಲಿಯೇ ರಾಜ್ಯ ಸರ್ಕಾರ ಪತನವಾಗುವುದು ಖಚಿತ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರಿಯಬೇಕೆಂದು ಒಂದು ಅಹಿಂದ ಟೀಂ ಯಾವಾಗಲೂ ಕೆಲಸ ಮಾಡುತ್ತದೆ. ಆ ಅಹಿಂದ ಟೀಂ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದರು. ನಾನು ಚುನಾವಣೆಗೆ ಮೊದಲೇ ಹೇಳಿದ್ದೆ. ಜಾರಕಿಹೊಳಿ, ಪರಮೇಶ್ವರ್, ಕೆ.ಎನ್.ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸ್ತಾರೆ ಎಂದಿದ್ದೆ. ನಾನು ಹೇಳಿದ್ದೆ. ರಿಪೀಟ್ ಆಗಿದೆ. 2 ಲಕ್ಷ ಮತಗಳ ಅಂತರದಿಂದ ಸೋಲಿಸ್ತಾರೆ ಅಂತಾನೂ ಹೇಳಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.