Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
ರಾತ್ರಿ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ!!
Team Udayavani, Oct 9, 2024, 10:00 AM IST
ಶಿವಮೊಗ್ಗ : ನಗರದ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಘಟನೆ ಬುಧವಾರ(ಅ9) ಬೆಳಗ್ಗೆ ನಡೆದಿದೆ.
ಶಿವಮೊಗ್ಗ ನಗರದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ಸಿಲುಕಿದ್ದ ಗೋಪಾಲ್ (35) ಎಂಬ ವ್ಯಕ್ತಿಯನ್ನು ಅಗ್ನಿಶಾಮಕದಳ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳ ಸಿಬಂದಿ ರಕ್ಷಣ ಕಾರ್ಯಾಚರಣೆಗಿಳಿದಿದ್ದಾರೆ. ಗೋಪಾಲ್ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ ಬೆಳಗ್ಗೆ ಎಚ್ಚರವಾದಾಗ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ದಡಕ್ಕೆ ಬರಲಾಗದೆ ಆತಂಕಕ್ಕೀಡಾಗಿದ್ದ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳ ಸಿಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬೋಟ್ ಮೂಲಕ ಕಾರ್ಯಾಚರಣೆ ನಡೆಸಿ ಗೋಪಾಲ್‌ನನ್ನು ರಕ್ಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.