ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ: ಕುಮಾರಸ್ವಾಮಿ


Team Udayavani, Sep 23, 2022, 10:25 AM IST

hd kumaraswamy cn ashwath narayan

ಬೆಂಗಳೂರು: ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ ಅನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸುವಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಶಾಮೀಲಾಗಿದ್ದು, ಹಣಕಾಸಿನ ಅವ್ಯವಹಾರವೂ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದರು. ಇದೀಗ ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ ಎಂದು ಆರೋಪಿಸಿದ್ದಾರೆ.

ನಮ್ಮ 3 ಬೇಡಿಕೆಯಿದೆ. 1 ಬಿಎಂಎಸ್ ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. 2.ಟ್ರಸ್ಟ್‌ ಮತ್ತು ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. 3.ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು.

ಬಿಎಂಸ್ ಟ್ರಸ್ಟ್ ಬಗ್ಗೆ ಬಿಜೆಪಿ ಸರಕಾರ ಕಾನೂನುರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ ನಾರಾಯಣ ಹೇಳಿದ್ದಾರೆ. ಕಾನೂನುರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ ಎಂದು ಪ್ರಶ್ನಿಸಿದ್ದಾರೆ.

ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ʼನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು. ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ ಬಿಎಂಎಸ್ ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ. ಆದರೆ, ನೀವು ಜನರಿಗೆ ಮತ್ತು ಸರಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ. ಬಿಎಂಎಸ್ ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು ನಿಮ್ಮ ಗಮನಕ್ಕೆ ಬರಲಿಲ್ಲವೇ? ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ? ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು ಎಂದಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿ ಕೊಡುವುದಾ? ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ?  ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ?  ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ? ಶೈಕ್ಷಣಿಕೋದ್ಧಾರ ಮಾಡುವುದು ಎಂದರೆ ಹೀಗೆನಾ ಎಂದು ಎಚ್ ಡಿಕೆ ಖಾರವಾಗಿ ಪ್ರಶ್ನಿಸಿದ್ದಾರೆ.

2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ ಬಿಎಂಎಸ್ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು  ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.