ಸಿಡಿಲಬ್ಬರದ ಮಳೆಗೆ ಇಬ್ಬರು ಬಲಿ
Team Udayavani, Oct 10, 2019, 3:00 AM IST
ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಉತ್ತಮ ಮಳೆಯಾಯಿತು. ಹೊಸನಗರದಲ್ಲಿ ರಾಜ್ಯದಲ್ಲಿಯೇ ಅಧಿಕ, 16 ಸೆಂ.ಮೀ.ಮಳೆ ಸುರಿಯಿತು.
ಈ ಮಧ್ಯೆ, ಹೊಸನಗರ ಸಮೀಪದ ಕೊಡಚಾದ್ರಿ ಗಿರಿಯಲ್ಲಿ ಸಿಡಿಲು ಬಡಿದು ಕೇರಳದ ಪೆರಿಮಣ್ಣ ಗ್ರಾಮದ ಜಂಶೀರ್ (32) ಎಂಬುವರು ಮೃತಪಟ್ಟಿದ್ದಾರೆ. ಜಂಶೀರ್, ಕೇರಳದ ಕಲ್ಲಿ ಕೋಟೆಯ ಖಾಸಗಿ ಕಂಪನಿಯೊಂದರಲ್ಲಿ ಕ್ಯಾರಿ ಗೈಡಿಂಗ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಸ್ನೇಹಿತರ ಜೊತೆ ಟ್ರಕ್ಕಿಂಗ್‌ಗೆ ಬಂದಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಹೆಬ್ರಿ ಶಿವಪುರ ಯಡೆª ನಿವಾಸಿ ಹರೀಶ್ ಪೂಜಾರಿ (27) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ.
ಇದೇ ವೇಳೆ, ಧರ್ಮಸ್ಥಳ, ಶೃಂಗೇರಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಶಿರಾಲಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 35.1ಡಿ.ಸೆ. ಮತ್ತು ಬೀದರ್‌ನಲ್ಲಿ ಅತಿ ಕನಿಷ್ಠ 19ಡಿ.ಸೆ.ತಾಪಮಾನ ದಾಖಲಾಗಿದೆ. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.