ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠ
Team Udayavani, Aug 11, 2022, 4:10 PM IST
ದಾವಣಗೆರೆ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠಗಳು ಪ್ರಾರಂಭ ಆಗಬಹುದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಲಬುರಗಿ ಕಡೆ ಪೀಠ ಪ್ರಾರಂಭ ಮಾಡುತ್ತೇವೆ ಎನ್ನುತ್ತಿದ್ದಾರೆ. ಮೈಸೂರು ಭಾಗದಲ್ಲೂ ಪೀಠ ಸ್ಥಾಪನೆಗೆ ಮುಂದಾದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಉತ್ತರ ಕರ್ನಾಟಕದ ಭಾಗದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಪ್ರತಿ ಗ್ರಾಮಕ್ಕೂ ತೆರಳಿ ಸಮಾಜದ ಸೇವೆ ಮಾಡಲಿಕ್ಕೆ ಆಗುತ್ತಿಲ್ಲ. ಸಮಾಜದ ಸೇವೆಗಾಗಿ ಇನ್ನೂ ಎರಡು ಮಠಗಳಾದರೂ ಆಗಬಹುದು.ಬಬಲೇಶ್ವರದಲ್ಲಿನ ಮೂರನೇ ಪೀಠಕ್ಕೆ ನಮ್ಮ ಮಠದ ಸಹಕಾರ ಇದೆ ಎಂದು ತಿಳಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪ್ರಾರಂಭದಲ್ಲೇ ಐದು ಪೀಠಗಳ ಮಾಡುವ ಚಿಂತನೆ ಇತ್ತು. ಮೂರು ಆಗಿವೆ. ಶಾಖಾಮಠಗಳ ಮಾಡುವ ಚಿಂತನೆ ಇದೆ. ಸಾಕಷ್ಟು ಅಧ್ಯಯನ ಮಾಡಿದವರು, ಧಾರ್ಮಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮತ್ತು ಮುಖ್ಯವಾಗಿ ನಮ್ಮ ಸಮಾಜದವರೇ ಇದ್ದರೆ ಶಾಖಾಮಠ ಮಾಡಲಿಕ್ಕೆ ಆಗುತ್ತದೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2 ಎ ಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಎಂಟು ನೂರು ಪುಟಗಳ ದಾಖಲೆ ಸಹಿತ ಮನವಿ ಸಲ್ಲಿಸ ಲಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನು ಮೂರು ಬಾರಿ ಭೇಟಿ ಮಾಡಿ, ಚರ್ಚಿಸಲಾಗಿದೆ. ಎಲ್ಲ ಜಿಲ್ಲೆಯಲ್ಲಿ ಅಧ್ಯಯನ ನಡೆಸಿದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿ ದ್ದಾರೆ. ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ನಮ್ಮ ಬೇಡಿಕೆ ಈಡೇರಬಹುದು ಎಂದು ತಿಳಿಸಿದರು.
ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಗೆ ಒತ್ತಾಯಿಸಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಮನವಿ ಸಲ್ಲಿಸಲಾಗಿತ್ತು. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸಮಾಜದ ಹೆಸರು ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ವಾಪಸು ಕಳಿಸಿತ್ತು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅನುಕೂಲ ಆಗುವಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಎರಡು ಮೂರು ತಿಂಗಳಲ್ಲಿ ಸೇರ್ಪಡೆ ಆಗುವ ವಿಶ್ವಾಸ ಇದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.