ಕೋವಿಡ್ ಸೋಂಕಿಗೆ ಬೆಂಗಳೂರಿನಲ್ಲಿ ಮತ್ತೋರ್ವ ಬಲಿ: ರಾಜ್ಯದಲ್ಲಿ ಮತ್ತೆರಡು ಹೊಸ ಪ್ರಕರಣ
Team Udayavani, Apr 14, 2020, 7:19 PM IST
ಬೆಂಗಳೂರು: ಕೋವಿಡ್-19 ಸೋಂಕಿಗೆ ಬೆಂಗಳೂರು ನಗರದಲ್ಲಿ ಮತ್ತೊಂದು ಬಲಿಯಾಗಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸ್ಥಳೀಯ 76 ವರ್ಷದ ವೃದ್ಧ ಸೋಂಕಿನ ಕಾರಣದಿಂದ ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನ ಕಾರಣದಿಂದ ಹತ್ತು ಜನರು ಸಾವನ್ನಪ್ಪಿದ್ದಾರೆ.
ಬಳಲುತ್ತಿದ್ದ ಸ್ಥಳೀಯ 76 ವರ್ಷದ ವೃದ್ಧನಿಗೆ ಕೋವಿಡ್-19 ಸೋಂಕು ತಗುಲಿತ್ತು. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
ಮತ್ತೆರಡು ಹೊಸ ಸೋಂಕು ಪ್ರಕರಣ
ರಾಜ್ಯದಲ್ಲಿ ಮತ್ತೆ ಎರಡು ಸೋಂಕು ಪ್ರಕರಣಗಳು ದೃಢವಾಗಿದೆ. ಬೆಂಗಳೂರು ನಗರದ ಮಹಿಳೆ ಮತ್ತು ಭಟ್ಕಳದ ಪುರುಷನಿಗೆ ಸೋಂಕು ದೃಢವಾಗಿದೆ.
ಸೋಂಕಿತ ಸಂಖ್ಯೆ 176ರ ಮಹಿಳೆಯ ಸಂಪರ್ಕದಿಂದ ಆಕೆಯ ಪತಿ 36 ವರ್ಷದ ಭಟ್ಕಳದ ವ್ಯಕ್ತಿಗೆ ಸೋಂಕು ದೃಢವಾಗಿದೆ.
ಸೋಂಕಿತ ಸಂಖ್ಯೆ 199 ರ ಸಂಪರ್ಕದಿಂದ ಬೆಂಗಳುರು ನಗರದ 35 ವರ್ಷದ ಮಹಿಳೆಗೆ ಸೋಂಕು ದೃಢವಾಗಿದ್ದು, ನಗರದ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 260 ಜನರಿಗೆ ಸೋಂಕು ದೃಢವಾಗಿದ್ದು, ಅವುಗಳ ಪೈಕಿ 71 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 10 ಜನರು ರಾಜ್ಯದಲ್ಲಿ ಇದುವರೆಗೆ ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.