ಬಂಡಾಯ ಶಾಸಕರಿಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದ ಜೆಡಿಎಸ್
ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ದೂರು ನೀಡಲು ತೀರ್ಮಾನ
Team Udayavani, Jun 22, 2022, 6:35 PM IST
ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಧೋರಣೆ ಹೊಂದಿದ್ದ, ರಾಜ್ಯ ಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿ ಪಕ್ಷಕ್ಕೆ ಆಘಾತ ನೀಡಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಅವರನ್ನು ಬುಧವಾರ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಸಭೆಯಲ್ಲಿ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.
ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ನಾಳೆ ಅಥವಾ ನಾಡಿದ್ದರ ಒಳಗಾಗಿ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಬಂಡೆಪ್ಪ ಕಾಶೆಂಪುರ ಮಾಹಿತಿ ನೀಡಿದರು.
ಸಭೆಯಲ್ಲಿ ಸುದೀರ್ಘ ಚರ್ಚೆ
ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಬೆಳೆವಣಿಗೆಗಳ ಬಗ್ಗೆ ಕೊಟ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು.
ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಪ್ರುಲ್ಲಾ ಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಕೆ.ಎಂ.ತಿಮ್ಮರಾಯಪ್ಪ, ಟಿ.ಎ.ಶರವಣ, ಶಾರದಾ ಪೂರ್ಯನಾಯಕ್, ರೂತ್ ಮನೋರಮಾ, ವಿ.ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್, ವಿಲ್ಸನ್ ರೆಡ್ಡಿ, ಸುಧಾಕರ ಲಾಲ್, ಹೆಚ್.ಎಂ.ರಮೇಶ್ ಗೌಡ, ಆರ್.ಪ್ರಕಾಶ್, ಸಯ್ಯದ್ ಶಫಿ ಉಲ್ಲಾ, ನಾಸಿರ್ ಉಸ್ತಾದ್ ಹಾಗೂ ಕೋರ್ ಕಮಿಟಿ ಸಂಚಾಲಕರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು.
ಸಭೆಯಲ್ಲಿ ಹೆಚ್.ಡಿ.ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಕೆಲವು ಮಹತ್ವದ ಅಂಶಗಳ ಬಗ್ಗೆ ಪಕ್ಷದ ಪ್ರಮುಖರಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.