ಉಡುಪಿ: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
Team Udayavani, Sep 7, 2022, 9:21 PM IST
ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಮೂರು ವರ್ಷದ ಹಿಂದೆ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಬಾಗಲಕೋಟೆ ಜಿಲ್ಲಾ ಬಾದಾಮಿ ತಾಲೂಕಿನ ಹನುಮಂತ ಬಸಪ್ಪ ಕಂಬಳಿ (42)ಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ ಸಹಿತ ಇತರೆ ಪ್ರಕರಣಗಳಿಗೂ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶ ಶ್ರಿನಿವಾಸ ಸುವರ್ಣ, ಆರೋಪಿಯನ್ನು ದೋಷಿ ಎಂಬುದಾಗಿ ಸೆ.5ರಂದು ತೀರ್ಪು ನೀಡಿ, ಶಿಕ್ಷೆಯ ಪ್ರಮಾಣವನ್ನು ಸೆ.6ರಂದು ಪ್ರಕಟಿದರು.
ಆರೋಪಿಗೆ ಐಪಿಸಿ ಕಲಂ 302(ಕೊಲೆ) ಅಡಿಯಲ್ಲಿ ಜೀವಿತಾವಧಿ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ, ಪೋಕ್ಸೋ ಕಾಯ್ದೆಯಡಿ ಬರುವ ಅಪ್ರಾಪ್ತಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ, ಅಪ್ರಾಪ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ 10 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ, ಸಾಕ್ಷ್ಯನಾಶದಡಿ 7 ವರ್ಷ ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಿದ್ದು ದಂಡ ಪಾವತಿ ಮಾಡಲು ತಪ್ಪಿದಲ್ಲಿ ಒಂದು ವರ್ಷ ಕಠಿನ ಸಜೆ ವಿಧಿಸಿ ಆದೇಶಿಸಿದ್ದಾರೆ. ದಂಡದ 32 ಸಾವಿರ ರೂ. ಮೊತ್ತದಲ್ಲಿ 7 ಸಾವಿರ ರೂ. ಸರಕಾರಕ್ಕೆ, 25 ಸಾವಿರ ರೂ. ಮೊತ್ತ ಮೃತ ಬಾಲಕಿ ಕುಟುಂಬಕ್ಕೆ ಹಾಗೂ ಸರಕಾರದಿಂದ ಬಾಲಕಿ ಪೋಷಕರಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯದ ತೀರ್ಪಿನಲ್ಲಿ ಹೇಳಲಾಗಿದೆ.
ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು. ಉಡುಪಿಯ ಅಂಗಡಿಯೊಂದರಲ್ಲಿ ಬಾಲಕಿ ಕೆಲಸ ಮಾಡಿಕೊಂ ಹನುಮಂತ ಅ ಡಿದ್ದು, 2019ರ ಮಾ.9ರಂದು ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದನು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.