Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
Team Udayavani, Oct 18, 2024, 6:58 AM IST
ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್‌ಗಳ (ಯುಜಿನೀಟ್) ಮಾಪ್‌ಅಪ್ ಸುತ್ತಿನ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದ್ದ ತಾತ್ಕಾಲಿಕ ಫಲಿತಾಂಶವನ್ನು ಹಿಂಪಡೆದಿದ್ದು, ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಅ. 18ರಂದು ಮಧ್ಯಾಹ್ನ 1 ಗಂಟೆ ವೇಳೆಗೆ ಪ್ರಕಟಿಸಲಿದೆ. ಈ ವಿಷಯವನ್ನು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫಲಿತಾಂಶ ಹಿಂಪಡೆಯಲು ಕಾರಣವೇನು?:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ಸಂಬಂಧಿಸಿದಂತೆ ಅ. 9ರಂದು ಹೆಚ್ಚುವರಿಯಾಗಿ 100 ಸೀಟು ಸೇರ್ಪಡೆ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಿತ್ತು. ಈ ಸಂದರ್ಭದಲ್ಲಿ ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಪ್ರವೇಶ ಪಡೆದಿದ್ದವರಿಗೂ ಈ ಕಾಲೇಜಿಗೆ ಸಂಬಂಧಿಸಿದಂತೆ ಆಪ್ಷನ್ ದಾಖಲಿಸಲು ಅವಕಾಶ ನೀಡಲಾಯಿತು. ಆ ಬಳಿಕ ಕೆಂಪೇಗೌಡ ವೈದ್ಯಕೀಯ ಕಾಲೇಜು ಮತ್ತು ಮಾಪ್‌ಅಪ್ ಸುತ್ತಿನ ವೈದ್ಯಕೀಯ ಸೀಟು ಹಂಚಿಕೆಯನ್ನು ಏಕಕಾಲದಲ್ಲಿ ಮಾಡಿದ್ದರಿಂದ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿ, ಸೀಟು ಹಂಚಿಕೆಯಲ್ಲಿ ಲೋಪಗಳು ಕಂಡು ಬಂದಿತ್ತು. ಅದನ್ನು ಸರಿ ಮಾಡಿ ಶುಕ್ರವಾರ ಪ್ರಕಟಿಸಲಾಗುವುದು. ಶುಕ್ರವಾರ ಸಂಜೆ 6 ಗಂಟೆ ಒಳಗೆ ಆಕ್ಷೇಪಣೆಗಳು ಇದ್ದಲ್ಲಿ ತಿಳಿಸಬಹುದು ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.