![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 2, 2022, 4:21 PM IST
ಬೆಂಗಳೂರು: ನವೀನ್ ಅವರ ಅಕಾಲಿಕ ನಿಧನ ನೋವಿನ ಸಂಗತಿಯಾಗಿದೆ. ಈ ದುಃಖದ ಸಮಯದಲ್ಲಿ ಸರಕಾರವು ಅವರ ಕುಟುಂಬದೊಂದಿಗೆ ನಿಲ್ಲಲಿದೆ, ಆದರೆ, ಇದನ್ನೇ ನೆಪವಾಗಿಟ್ಟುಕೊಂಡು ಜಾತಿ ವ್ಯವಸ್ಥೆ ಮತ್ತು ಮೀಸಲಾತಿ ಬಗ್ಗೆ ಮಾತನಾಡುವುದು ಅನುಚಿತವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರವು ಕಡುಬಡವರು, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವವರ ಬಗ್ಗೆಯೂ ಚಿಂತಿಸಬೇಕಾಗುತ್ತದೆ. ಒಂದು ಪ್ರಕರಣವನ್ನು ಇಟ್ಟುಕೊಂಡು ವ್ಯವಸ್ಥೆಯ ಬಗ್ಗೆ ಷರಾ ಬರೆಯುವುದು ಸರಿಯಲ್ಲ ಎಂದರು.
ಇಡೀ ದೇಶದಲ್ಲೇ ನಮ್ಮ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವೈದ್ಯಕೀಯ ಕಾಲೇಜುಗಳಲ್ಲಿ ಪರಿಶಿಷ್ಟರಿಗೆ ಉಚಿತವಾಗಿ ನೀಡಲಾಗುತ್ತಿದೆ. ಶೇ.40ರಷ್ಟು ಸೀಟುಗಳನ್ನು ಪ್ರತಿಭಾವಂತ ಬಡವರಿಗೆ ರಿಯಾಯಿತಿ ದರದಲ್ಲಿ ಕೊಡಲಾಗುತ್ತಿದೆ. ಇದನ್ನು ದೇಶದಾದ್ಯಂತ ಶೇ 60ಕ್ಕೆ ಏರಿಸಬೇಕೆನ್ನುವುದು ಪ್ರಧಾನಿ ಮೋದಿಯವರ ಹಂಬಲವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ಸಾಧ್ಯವಾಗಬಹುದು ಎಂದು ಹೇಳಿದರು.
ಇದನ್ನೂ ಓದಿ:ಶಾರುಖ್ ‘ಪಠಾಣ್’ ಚಿತ್ರದ ಟೀಸರ್ ಬಿಡುಗಡೆ ; ರಿಲೀಸ್ ಡೇಟ್ ಘೋಷಣೆ
ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಇದರಿಂದ ಬಡಕುಟುಂಬದ ಮಕ್ಕಳೂ ವೈದ್ಯರಾಗಬಹುದು. ಇದನ್ನು ವಿರೋಧಿಸುವವರು ಧನದಾಹಿಗಳು ಮತ್ತು ದ್ರೋಹಿಗಳು ಎಂದು ಅಭಿಪ್ರಾಯಪಟ್ಟರು.
ಉಕ್ರೇನಿನಲ್ಲಿದ್ದ 20 ಸಾವಿರ ಭಾರತೀಯರ ಪೈಕಿ ಈಗಾಗಲೇ 2 ಸಾವಿರ ಮಂದಿಯನ್ನು ಕರೆತರಲಾಗಿದೆ. ಉಳಿದವರನ್ನು ಕೂಡ ಸದ್ಯದಲ್ಲೇ ಕರೆದುಕೊಂಡು ಬರಲಾಗುವುದು. ಈ ಸಂಬಂಧ ಉಕ್ರೇನ್, ರಷ್ಯಾ, ಪೋಲೆಂಡ್, ರುಮೇನಿಯಾ ಮುಂತಾದ ದೇಶಗಳೊಂದಿಗೆ ಕೇಂದ್ರ ಸರಕಾರವು ಈಗಾಗಲೇ ಮಾತುಕತೆ ನಡೆಸುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ಇವು ಎಲ್ಲ ಕಾಲದಲ್ಲೂ ಇರುತ್ತವೆ ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.