ಬಿಎಸ್‌ವೈ ಭೇಟಿಯಾಗಿ ಚರ್ಚಿಸಿದ ಉಮೇಶ್‌ ಕತ್ತಿ


Team Udayavani, Jun 4, 2020, 8:17 AM IST

bsy-beti

ಬೆಂಗಳೂರು: ಬಿಜೆಪಿ ಅತೃಪ್ತ ಶಾಸಕರ ಸರಣಿ ಸಭೆ ನಡೆಸುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಸಚಿವ ಉಮೇಶ್‌ ಕತ್ತಿ ಬುಧವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿರುವುದು  ಕುತೂಹಲ ಮೂಡಿಸಿದೆ. ತಮ್ಮ ಸೂಚನೆ ಮೇರೆಗೆ ಭೇಟಿಯಾಗಿದ್ದ ಉಮೇಶ್‌ ಕತ್ತಿಯವರಿಗೆ ಸಚಿವ ಸ್ಥಾನದ ಖಾತರಿ ನೀಡಿರುವ ಯಡಿಯೂ ರಪ್ಪ ಅವರು ರಮೇಶ್‌ ಕತ್ತಿಗೆ ರಾಜ್ಯಸಭಾ ಟಿಕೆಟ್‌ ನೀಡುವ ವಿಚಾರದ ಬಗ್ಗೆ ಪಕ್ಷದ ವರಿಷ್ಠರ  ನಿರ್ಧಾ ರವೇ ಅಂತಿಮ ಎಂಬುದಾಗಿ ಸ್ಪಷ್ಟ ವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಹಾಗಾಗಿ ಉಮೇಶ್‌ ಕತ್ತಿ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಹೋದರ ರಮೇಶ್‌ ಕತ್ತಿಯವರಿಗೆ ರಾಜ್ಯಸಭಾ ಟಿಕೆಟ್‌ ನೀಡುವುದು  ಹಾಗೂ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಉಮೇಶ್‌ ಕತ್ತಿ 15 ದಿನಗಳಲ್ಲಿ ಎರಡು ಬಾರಿ ಅತೃಪ್ತ ಶಾಸಕರ ಸಭೆ ನಡೆಸಿದ್ದು, ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ವೈಯಕ್ತಿಕ ಸ್ಥಾನಮಾನಕ್ಕಾಗಿ ಒತ್ತಡ ಹೇರಲು  ಸಭೆ ನಡೆಸಿದ್ದಾರೆ ಎನ್ನಲಾದರೂ ಕ್ರಮೇಣ ಈ ರೀತಿಯ ಸಭೆಗಳು ನಾಯಕತ್ವದ ಬಗ್ಗೆಯೇ ಅಪಸ್ವರ ವ್ಯಕ್ತವಾಗುವ ಮಾತುಗಳೂ ಕೇಳಿಬಂದಿದ್ದವು. ಈ ಮಧ್ಯೆ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಉಮೇಶ್‌ ಕತ್ತಿ ಬುಧವಾರ  ಭೇಟಿಯಾಗಿದ್ದರು.

ತಮಗೆ ಸಚಿವ ಸ್ಥಾನದ ಜತೆಗೆ ಸಹೋದರನಿಗೆ ರಾಜ್ಯಸಭಾ ಟಿಕೆಟ್‌ ನೀಡುವಂತೆ ಅವರು ಮತ್ತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸದ್ಯದಲ್ಲೇ ಸಂಪುಟ ವಿಸ್ತರಣೆಯಾಗಲಿದ್ದು, ತಮ್ಮನ್ನು  ಚಿವರನ್ನಾಗಿ  ಮಾಡುವುದು ಖಚಿತ. ಆದರೆ ಸಹೋದರನಿಗೆ ರಾಜ್ಯಸಭಾ ಟಿಕೆಟ್‌ ನೀಡುವ ಬಗ್ಗೆ ವರಿಷ್ಠರ ನಿರ್ಧಾರವೇ ಅಂತಿಮ. ಆ ಬಗ್ಗೆ ಯಾವುದೇ ಖಾತರಿ ನೀಡಲಾಗದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ  ಉಮೇಶ್‌ ಕತ್ತಿಯವರು ಇತ್ತೀಚೆಗೆ ನಡೆದ ಶಾಸಕರ ಸಭೆ ಬಗ್ಗೆಯೂ ಸ್ಪಷ್ಟನೆ ನೀಡಿದರು. ಅಲ್ಲಿ ಪ್ರಸ್ತಾಪವಾದ ವಿಚಾರದ ಬಗ್ಗೆಯೂ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಉಮೇಶ್‌ ಕತ್ತಿ ಕುಟುಂಬ ಹಿಡಿತ ಹೊಂದಿದೆ. ಆದರೆ ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿಅವರನ್ನು ಡಿಸಿಎಂ ಮಾಡಲಾಗಿದೆ. ಶಶಿಕಲಾ ಜೊಲ್ಲೆ ಸಚಿವರಾಗಿದ್ದಾರೆ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ರಮೇಶ್‌ ಜಾರಕಿಹೊಳಿ ಕೊನೆಗೂ ಬೆಳಗಾವಿ  ಉಸ್ತುವಾರಿ  ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸಹೋದರನಿಗೆ ರಾಜ್ಯಸಭಾ ಟಿಕೆಟ್‌ ಕೂಡ ಕೈತಪ್ಪಿದರೆ ಜಿಲ್ಲೆಯಲ್ಲಿ ತಮ್ಮ ಪ್ರಭಾವ ಕುಗ್ಗುವ ಆತಂಕದಿಂದ ಉಮೇಶ್‌ ಕತ್ತಿಯವರು ಸಹೋದರನಿಗೆ ಟಿಕೆಟ್‌ ಕೊಡಿಸಲು ಇನ್ನಿಲ್ಲದ ಕಸರತ್ತು  ನಡೆಸಿದ್ದು, ಎಷ್ಟರ ಮಟ್ಟಿಗೆ ಕೈ ಹಿಡಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.