ಭೂಗತ ಪಾತಕಿ ರಶೀದ್ ಮಲಬಾರಿ ಮತ್ತೆ ಸಕ್ರಿಯ!
Team Udayavani, Oct 30, 2019, 3:05 AM IST
ಬೆಂಗಳೂರು: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಭೂಗತ ಪಾತಕಿ ರಶೀದ್ ಮಲಬಾರಿ ಬೆಂಗಳೂರಿನಲ್ಲಿ ತನ್ನ ಚಟುವಟಿಕೆಗಳನ್ನು ವಿಸ್ತರಿಸಲು ಹವಣಿಸಲು ಯತ್ನಿಸುತ್ತಿದ್ದಾನೆಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ರಶೀದ್ ಮಲಬಾರಿ ಆಪ್ತ ಡೈನಾಮಿಕ್ ಖಲೀಲ್ ಹತ್ಯೆಗೆ ಸಂಚು ರೂಪಿಸಿದ್ದ ಎದುರಾಳಿ ಗುಂಪಿನ ತೌಸಿಫ್ ಹಾಗೂ ಆತನ ಸಹಚರನನ್ನು ಬಂಧಿಸಿದ ಸಿಸಿಬಿ ಪೊಲೀಸರ ತನಿಖೆಯಲ್ಲಿ ಈ ಮಾಹಿತಿ ಹೊರಬಂದಿದೆ.
ಅಪರಾಧ ಚಟುವಟಿಕೆಗಳನ್ನು ವಿಸ್ತಾರಗೊಳಿಸು ತ್ತಿದ್ದಾರೆಂಬ ಬಗ್ಗೆ ಮಾಹಿತಿ ಆಧರಿಸಿ ರೌಡಿ ತೌಸಿಫ್ ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಖಲೀಲ್ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ಗೊತ್ತಾಯಿತು. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಸಂಚು ರೂಪಿಸಿದ್ದಾಗಿ ಹೇಳಿದ್ದಾರೆ. ಸದ್ಯ ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ರಶೀದ್ ಮಲಬಾರಿ ಹಾಗೂ ತೌಸಿಫ್ ನಡುವೆ ಗಲಾಟೆ ನಡೆದು ಪರಸ್ಪರ ವೈಷಮ್ಯ ಬೆಳೆದು ಕೊಲ್ಲುವ ಬೆದರಿಕೆಯನ್ನೂ ಹಾಕಿಕೊಂಡಿದ್ದರು.
ಇದೇ ವೈಷಮ್ಯದಿಂದ ರಶೀದ್ ಮಲಬಾರಿ, ತೌಸಿಫ್ನನ್ನು ಮುಗಿಸಲು ಮುಂಬೈನ ಶಾರ್ಪ್ ಶೂಟರ್ಗಳಿಗೆ ಸುಪಾರಿ ನೀಡಿದ್ದ. ಇತ್ತ ತೌಸಿಪ್ ಕೂಡ, ಮಲಬಾರಿ ಆಪ್ತ ಖಲೀಲ್ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಮೂಲಗಳು ಹೇಳಿವೆ. ಕೆ.ಜಿ ಹಳ್ಳಿಯ ಠಾಣೆಯ ರೌಡಿ ಶೀಟರ್ ಸಹ ಆಗಿರುವ ಡೈನಾಮಿಕ್ ಖಲೀಲ್ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರಶೀದ್ ಮಲಬಾರಿ ಕೂಡ ಭೂಗತನಾಗಿದ್ದಾನೆ. ಇಬ್ಬರ ಚಟುವಟಿಕೆಗಳ ಬಗ್ಗೆಯೂ ತನಿಖೆ ಮುಂದುವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.