ಅಂತರ್ಜಲ ಹೆಚ್ಚಳಕ್ಕೆ ಅಕಾಲಿಕ ಮಳೆ ನೆರವು
Team Udayavani, Dec 17, 2021, 8:15 AM IST
ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಮಳೆ ತನ್ನ ಜಾಯಮಾನ ಬದಲಿಸಿದೆ. ಬೆಂಗಳೂರು ಸೇರಿದಂತೆ ಬಯಲುಸೀಮೆಯಲ್ಲಿ ಹೆಚ್ಚು ಮಳೆ ಸುರಿಯುತ್ತಿದ್ದು, ಈ ಭಾಗಗಳಲ್ಲಿ ಅಂತರ್ಜಲ ಮಟ್ಟ ಕೂಡ ಏರಿಕೆಯಾಗುತ್ತಿದೆ. ಇದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
ರಾಜ್ಯದ 227 ತಾಲೂಕುಗಳಲ್ಲಿ ರಾಜ್ಯ ಅಂತರ್ಜಲ ನಿರ್ದೇಶನಾಲಯ ನಿರ್ಮಿಸಿರುವ ಕೊಳವೆಬಾವಿಗಳ ಮೂಲಕ ಅಂತರ್ಜಲ ಮಟ್ಟವನ್ನು ಮಾಪನ ಮಾಡಲಾಗಿದೆ. ಈ ವೇಳೆ ಸುಮಾರು 144 ತಾಲೂಕುಗಳಲ್ಲಿ ಕನಿಷ್ಠ 0.5ರಿಂದ ಗರಿಷ್ಠ ಸುಮಾರು 27 ಮೀಟರ್‌ಗಳಷ್ಟು ಅಂತರ್ಜಲ ಮೇಲೆ ಬಂದಿರುವುದು ಕಂಡುಬಂದಿದೆ. ಇದರಲ್ಲಿ ಉತ್ತರ ಕರ್ನಾಟಕದ ಭಾಗಗಳು ಹೆಚ್ಚಿವೆ. ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಅಂತರ್ಜಲಮಟ್ಟ ಇಳಿಮುಖ ವಾಗಿರುವುದು ಅಚ್ಚರಿ ಮೂಡಿಸಿದೆ.
ಕೋಲಾರ, ಚಿಕ್ಕಬಳ್ಳಾಪುರ ಸಹಿತ ಬರದ ನಾಡಿನಲ್ಲಿ ಪ್ರಸಕ್ತ ವರ್ಷವೂ ಸೇರಿದಂತೆ ಈಚೆಗೆ ಹೆಚ್ಚು ಮಳೆಯಾಗುತ್ತಿದೆ. ಇದರೊಂದಿಗೆ ಸರಕಾರದ ವಿವಿಧ ಯೋಜನೆಗಳಡಿ ಕೆರೆ ತುಂಬಿಸುವುದು, ಕೃಷಿ ಹೊಂಡ ಅಂತರ್ಜಲ ಹೆಚ್ಚಳಕ್ಕೆ ನೆರವಾಗುತ್ತಿವೆ. ಈ ಎಲ್ಲ ಅಂಶಗಳಿಂದ ಪಾತಾಳಕ್ಕೆ ಕುಸಿದಿದ್ದ ಅಂತರ್ಜಲ ಮಟ್ಟವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಬೆಳವಣಿಗೆಯು ಭವಿಷ್ಯದಲ್ಲಿ ಆ ಭಾಗದ ಕೃಷಿ ಚಟುವಟಿಕೆಗಳಿಗೆ ಪೂರಕವಾಗಲಿದೆ.
3-4 ವರ್ಷ ಕೃಷಿಗೆ ಪೂರಕ:
ಸಾಮಾನ್ಯವಾಗಿ ಈ ಅವಧಿಯಲ್ಲಿ ಬಯಲುಸೀಮೆಯಲ್ಲಿ ಅಂತರ್ಜಲ ಮಟ್ಟ 15 ಮೀ. ಏರುತ್ತದೆ. ಆದರೆ ಈ ವರ್ಷ 25-30 ಮೀ.ವರೆಗೂ ಹೆಚ್ಚಳ ಆಗಿರುವುದು ಮಳೆಯ ಹೆಚ್ಚಳವನ್ನು ಸೂಚಿಸುತ್ತದೆ. ಅಲ್ಲದೆ, ಮಣ್ಣಿನಲ್ಲಿ ಫಲವತ್ತತೆ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕಡಿಮೆಯಾಗಿಲ್ಲ ಎಂಬುದರ ಸೂಚನೆ. ಇದು ಮುಂದಿನ 3-4 ವರ್ಷ ಕೃಷಿಗೆ ಪೂರಕವಾಗಲಿದೆ ಎಂದು ಕೃಷಿ ಹವಾಮಾನ ತಜ್ಞ ಡಾ| ಎಂ.ಬಿ. ರಾಜೇಗೌಡ ತಿಳಿಸಿದ್ದಾರೆ.
ಏಲ್ಲಿ ಏರಿಕೆ? : ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ಜಿಲ್ಲೆಗಳು
ಎಲ್ಲಿ ಇಳಿಕೆ? : ಮಲೆನಾಡು, ಕರಾವಳಿ, ಹಳೇ ಮೈಸೂರು ಭಾಗದ ಜಿಲ್ಲೆಗಳು
ಈ ಸಲ ಜೂನ್‌ನಿಂದ ನಿರಂತರವಾಗಿ ಮಳೆಯಾಗಿದೆ. ನಾಲ್ಕೈದು ದಶಕಗಳಲ್ಲಿ ಕಂಡರಿಯದ ಮಳೆ ಎಂದೂ ವಿಶ್ಲೇಷಿಸಲಾಗಿದೆ. ಇದರ ಜತೆಗೆ ಕಳೆದ ವರ್ಷ ಲಾಕ್‌ಡೌನ್‌ನಿಂದ ಬಳಕೆ ಪ್ರಮಾಣ ಕಡಿಮೆಯಾಗಿ, ಅಂತರ್ಜಲದ ಮೇಲಿನ ಒತ್ತಡವೂ ತಗ್ಗಿದೆ. ಇದರ ಫಲ ಅಂತರ್ಜಲ ಮಟ್ಟ ಏರಿಕೆಯಾಗಿದೆ. – ವಿ.ಎಸ್. ಪ್ರಕಾಶ್, ಅಂತರ್ಜಲ ತಜ್ಞ
-ವಿಜಯಕುಮಾರ ಚಂದರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.