ಎರಡು ಸ್ಥಾನ ಬಿಟ್ಟು ಕೊಡಲು ಅಸಮಾಧಾನ
Team Udayavani, May 29, 2019, 6:00 AM IST
ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಜೆಡಿಎಸ್‌ನಲ್ಲಿ ಅಸಮಾಧಾನ ಉಂಟಾಗಿದೆ. ಸಂಪುಟದಲ್ಲಿ ಜೆಡಿಎಸ್ ಕೋಟಾದ ಎರಡು ಸ್ಥಾನಗಳು ಖಾಲಿ ಇವೆ. ಆ ಸ್ಥಾನಗಳು ಅತೃಪ್ತ ಕಾಂಗ್ರೆಸ್ ಶಾಸಕರಿಗೆ ನೀಡಲು ಮುಂದಾಗಿರುವುದು ಸರಿಯಲ್ಲ. ಜೆಡಿಎಸ್ ಶಾಸಕರಿಗೆ ಅದು ಸಿಗಬೇಕೆಂದು ಕೆಲವು ಶಾಸಕರು ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆ ನಂತರ ಜೆಡಿಎಸ್ ನಾಯಕರು ತನ್ನ ಪಾಲಿನ ಎರಡು ಸಚಿವ ಸ್ಥಾನ ತುಂಬುವ ಭರವಸೆ ನೀಡಿದ್ದರು. ಆ ಎರಡೂ ಸ್ಥಾನ ನಮ್ಮ ಪಕ್ಷದವರಿಗೇ ಇರಲಿ. ಅದನ್ನು ಕಾಂಗ್ರೆಸ್‌ನ ಅತೃಪ್ತ ಶಾಸಕರಿಗೆ ಕೊಡುವುದು ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಒತ್ತಡ ಹೇರಲಾಗುತ್ತಿದೆ. ಜೆಡಿಎಸ್‌ನಲ್ಲಿ ಸಂಪುಟಕ್ಕೆ ಸೇರಲು ಎಚ್.ವಿಶ್ವನಾಥ್, ಬಸವರಾಜ ಹೊರಟ್ಟಿ, ಎಚ್.ಕೆ.ಕುಮಾರಸ್ವಾಮಿ, ಎ.ಟಿ.ರಾಮಸ್ವಾಮಿ, ಸತ್ಯನಾರಾಯಣ, ಶ್ರೀನಿವಾಸಗೌಡ, ಅನ್ನದಾನಿ, ಶ್ರೀನಿವಾಸಮೂರ್ತಿ, ಬಿ.ಎಂ.ಫರೂಕ್ ಆಕಾಂಕ್ಷಿಗಳಾಗಿದ್ದಾರೆ. ಎರಡು ಸ್ಥಾನಗಳನ್ನು ಆಕಾಂಕ್ಷಿಗಳ ಪೈಕಿ ಇಬ್ಬರಿಗೆ ಕೊಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ಸಂಪುಟ ವಿಸ್ತರಣೆ ಆಗಲಿ, ಸಂಪುಟ ಪುನಾರಚನೆ ಬೇಡ. ಕೆಲವು ಸಚಿವರನ್ನು ಕೈ ಬಿಟ್ಟರೆ ಮತ್ತೆ ಅಸಮಾಧಾನ ಉಂಟಾಗಬಹುದು ಎಂಬ ಅಭಿಪ್ರಾಯವನ್ನು ವಿಶ್ವನಾಥ್ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಕುಮಾರಸ್ವಾಮಿ ಜತೆಗಿನ ಭೇಟಿ ನಂತರ ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ ವಿಶ್ವನಾಥ, ಸಚಿವ ಡಿ.ಕೆ.ಶಿವಕುಮಾರ್ ಜತೆಯೂ ಪ್ರತ್ಯೇಕ ವಾಗಿ ಮಾತುಕತೆ ನಡೆಸಿದರು. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುನ್ನ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.