ಎಲ್ಲ ವಿವಿಗಳಿಗೆ “ಏಕರೂಪ ಕಾಯ್ದೆ’ ಮಸೂದೆ: ಮರುಪರಿಶೀಲನೆಗೆ ಸಮಿತಿ
Team Udayavani, Apr 16, 2020, 6:30 AM IST
ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳಿಗೂ ಏಕರೂಪದ ಕಾಯ್ದೆ ಜಾರಿಗೊಳಿಸುವ ಸಂಬಂಧ ರೂಪಿಸಲಾಗಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ – 2017 ಅನ್ನು ಪರಿಷ್ಕರಿಸಲು ತೀರ್ಮಾನಿಸಿರುವ ರಾಜ್ಯ ಸರಕಾರ, ಈ ನಿಟ್ಟಿನಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ.
ಉನ್ನತ ಶಿಕ್ಷಣ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ| ಸಿ.ಎನ್. ಅಶ್ವತ್ಥನಾರಾಯಣ ಅವರ ನಿರ್ದೇಶನದಂತೆ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಡಾ| ವಾಸುದೇವ ಅತ್ರೆ ಅವರು ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವ ಹಿಸಲಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಪ್ರೊ| ಬಿ. ತಿಮ್ಮೇಗೌಡ, ಐಐಐಟಿ ಬೆಂಗಳೂರಿನ ನಿರ್ದೇಶಕ ಪ್ರೊ| ಸಡಗೋಪನ್, ಸೃಷ್ಟಿ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ ಅಂಡ್ ಡಿಸೈನ್ ಟೆಕ್ನಾಲಜಿಯ ಗೀತಾ ನಾರಾಯನ್ ಸೃಷ್ಟಿ, ಸೆಂಟರ್ ಫಾರ್ ಎಜುಕೇಶನಲ್ ಆ್ಯಂಡ್ ಸೋಶಿಯಲ್ ಸ್ಟಡೀಸ್‌ನ ಅಧ್ಯಕ್ಷ ಡಾ| ಎಂ.ಕೆ. ಶ್ರೀಧರ್ ಸಮಿತಿಯ ಸದಸ್ಯರಾಗಿದ್ದು, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಸ್.ಎಂ. ಕೋರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ವರದಿ ಸಲ್ಲಿಸಲು ಸಮಿತಿಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.
ಈ ಮಸೂದೆಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲರು ಇದನ್ನು ರಾಷ್ಟ್ರಪತಿಗೆ ಕಳುಹಿಸಿಕೊಟ್ಟಿದ್ದರು. ಮಸೂದೆಯನ್ನು ಪರಾಮರ್ಶೆ ನಡೆಸಿದ ಕೇಂದ್ರ ಗೃಹ ಸಚಿವಾಲಯ ಅದರಲ್ಲಿರುವ 9 ಅಂಶಗಳ ಬಗ್ಗೆ ರಾಜ್ಯ ಸರಕಾರದಿಂದ ಸ್ಪಷ್ಟೀಕರಣ ಕೋರಿತ್ತು. ಅಲ್ಲದೆ ಮಸೂದೆಗೆ ಇನ್ನೂ ಕೆಲವು ಅಂಶಗಳನ್ನು ಸೇರಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.