ಅನ್‌ಲಾಕ್ ಹಂತ-2: ಮಾರ್ಗಸೂಚಿ
Team Udayavani, Jul 1, 2020, 7:54 AM IST
ಬೆಂಗಳೂರು: ಕೋವಿಡ್ 19 ಲಾಕ್‌ಡೌನ್ ಅನ್‌ಲಾಕ್ ಹಂತ-2 ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಅಧಿಸೂಚನೆ ಆಧಾರದ ಮೇಲೆ ರಾಜ್ಯ ಸರ್ಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಜುಲೈ 1 ರಿಂದ 31 ರವರೆಗೂ ಮುಂದುವರಿಯಲಿದೆ.
* ಜುಲೈ 31 ರವರೆಗೂ ಶಾಲಾ-ಕಾಲೇಜು, ತರಬೇತಿ ಸಂಸ್ಥೆಗಳು ತೆರೆಯುವುದಿಲ್ಲ. ಚಿತ್ರಮಂದಿರ, ಜಿಮ್, ಈಜುಕೊಳ, ಮೆಟ್ರೋ ಸೇವೆಯೂ ಇರುವುದಿಲ್ಲ. ಲಾಕ್ ಡೌನ್ ಇಲ್ಲದ ಸಮಯದಲ್ಲಿ ವಿವಾಹ ಸಮಾರಂಭಕ್ಕೆ ಅವಕಾಶವಿದ್ದು 50 ಜನ ಪಾಲ್ಗೊಳ್ಳಲು ಮಾತ್ರ ಆನುಮತಿ. ಭಾನುವಾರದ ಲಾಕ್‌ಡೌನ್ ಸಂದರ್ಭದಲ್ಲಿ ಮೊದಲೇ ನಿಗದಿಯಾಗಿರುವ ವಿವಾಹಕ್ಕೆ ಮಾತ್ರ ಅನುಮತಿಯಿದೆ.
* ರಾಜಕೀಯ ಸಭೆ, ಸಮಾರಂಭ, ಧಾರ್ಮಿಕ ಜಾತ್ರಗಳಿಗೆ, ಮನೋರಂಜನೆ ಪಾರ್ಕ್‌ಗಳಿಗೆ ನಿರ್ಬಂಧ ಮುಂದುವರಿಯಲಿದ್ದು, ಕೇಂದ್ರ ಗೃಹ ಸಚಿವಾಲಯದ ಅನುಮತಿ ಹೊರುತಪಡಿಸಿದ ಅಂತಾರಾಷ್ಟ್ರೀಯ ವಿಮಾನ ಸೇವೆಯೂ ಇರುವುದಿಲ್ಲ. ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ದೇಶೀಯ ವಿಮಾನ ಸೇವೆ ಹೆಚ್ಚಳಗೊಳ್ಳಲಿದೆ.
* ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಮುಂದುವರಿಯಲಿದ್ದು ಜು.31 ರವರೆಗೂ ಇದು ಮುಂದುವರಿಯಲಿದೆ. ಪ್ರತಿ ಭಾನುವಾರ ಲಾಕ್‌ಡೌನ್ ಪೂರ್ಣ ಪ್ರಮಾಣದಲ್ಲಿ ಮುಂದುವರಿಕೆ ಜುಲೈ 4 ರಿಂದ ಆ.2 ರವರೆಗೆ ಐದು ಭಾನುವಾರ ಮುಂದುವರಿಯಲಿದೆ. ರಾತ್ರಿ ಕರ್ಫ್ಯೂ 8 ಗಂಟೆಯಿಂದ ಮುಂಜಾನೆ 5 ಗಂಟೆವರೆಗೂ ಇರಲಿದೆ.
* ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ನಿಯಮಾವಳಿಗಳು ಜಾರಿಯಲ್ಲಿರಲಿದ್ದು ಯಥಾಸ್ಥಿತಿ ಮುಂದುವರಿಯಲಿದೆ. ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು ಜು.10 ರಿಂದ ಆಗಸ್ಟ್ 2ನೇ ವಾರದವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ರಜೆ ಇರಲಿದೆ.
ಮಾಸ್ಕ್ ಧರಿಸದಿದ್ದರೆ 200 ರೂ. ದಂಡ: ಸಾರ್ವಜನಿಕ ಸ್ಥಳ, ಸಂಚಾರ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಬೆಂಗಳೂರು ಸೇರಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 200 ರೂ. ದಂಡ, ರಾಜ್ಯದ ಇತರೆಡೆ ದಂಡದ ಮೊತ್ತ 100 ರೂ. ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.