Panchamasali ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ : ಹೆಬ್ಬಾಳ್ಕರ್ ಕಿಡಿ
ಬಿಜೆಪಿಯವರಿಗೆ ಈ ಪ್ರೀತಿ ಮೊದಲೇ ಯಾಕಿರಲಿಲ್ಲ...ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲು ಕೆಲವರ ಪ್ರಚೋದನೆಯೇ ಕಾರಣ
Team Udayavani, Dec 12, 2024, 6:36 PM IST
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಡಿ12) ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ‘ಮುಖ್ಯಮಂತ್ರಿಗಳ ಜತೆ ಮಾತನಾಡಲು ನಾನೇ ಆಹ್ವಾನಿಸಿದ್ದೆ. ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು. ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ ಯಾರು ಸಭೆಗೆ ಬರಲಿಲ್ಲ’ ಎಂದು ಆರೋಪ ಮಾಡಿದರು.
‘ಮೀಸಲಾತಿ ಹೋರಾಟ ರಾಜಕೀಯ ಆಗುತ್ತಿದೆ. ಇದರಲ್ಲಿ ಕಾಂಗ್ರೆಸ್, ಬಿಜೆಪಿ ಅಂತ ಬರಬಾರದು.ಮೀಸಲಾತಿ ವಿಚಾರವಾಗಿ ಬಿಜೆಪಿಯವರಿಗೆ ಈ ಪ್ರೀತಿ ಮೊದಲೇ ಯಾಕಿರಲಿಲ್ಲ. ಅವರ ಸರಕಾರ ಇದ್ದಾಗ 2A ಮೀಸಲಾತಿಯನ್ನು ಯಾಕೆ ಕೊಡಲಿಲ್ಲ. ಆಗ ಮೀಸಲಾತಿ ಕೊಡದೇ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು’ ಎಂದು ಕಿಡಿಕಾರಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲು ಕೆಲವರ ಪ್ರಚೋದನೆಯೇ ಕಾರಣ. ನ್ಯಾಯಾಲಯದ ಆದೇಶದಂತೆ ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ವತಃ ಪ್ರತಿಭಟನಾಕಾರರೇಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರು.ಆದರೆ, ಪ್ರತಿಭಟನೆಯಲ್ಲಿ ಆಗಿದ್ದೇನು? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.