ನಂಬರ್ ಪ್ಲೇಟ್ ಮೇಲೆ ಅನಧಿಕೃತ ಲಾಂಛನ, ಹೆಸರು ತೆರವಿಗೆ 10 ದಿನಗಳ ಗಡುವು
Team Udayavani, Jun 3, 2022, 8:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರಕಾರಿ ಇಲಾಖೆ, ನಿಗಮ-ಮಂಡಳಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ವಾಹನಗಳ ನಂಬರ್ ಪ್ಲೇಟ್‌ಗಳ ಮೇಲೆ ಅಳವಡಿಸಿರುವ ಅನಧಿಕೃತ ಹೆಸರು ಮತ್ತು ಚಿಹ್ನೆಗಳ ತೆರವಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಸಾರಿಗೆ ಇಲಾಖೆ, ಈ ಸಂಬಂಧ ಹತ್ತು ದಿನಗಳ ಗಡುವು ವಿಧಿಸಿದೆ.
ಸರಕಾರದ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸರಕಾರೇತರ ಸಂಘ-ಸಂಸ್ಥೆಗಳಲ್ಲಿ ಉಪಯೋಗಿಸುವ ಯಾವುದೇ ಖಾಸಗಿ ವಾಹನಗಳಲ್ಲಿ ಸ್ಥಳೀಯ ಸಂಸ್ಥೆಗಳ ಹೆಸರುಗಳನ್ನು, ಚಿಹ್ನೆ ಅಥವಾ ಲಾಂಛನಗಳನ್ನು ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ಅಳವಡಿಸಿಕೊಳ್ಳುವುದು ಕೇಂದ್ರ ಮೋಟಾರು ವಾಹನ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕುರಿತು ಹೈಕೋರ್ಟ್ ಕೂಡ ಆದೇಶ ಹೊರಡಿಸಿದೆ. ಅದರಂತೆ ತೆರವುಗೊಳಿಸಲು ಸೂಚಿಸಲಾಗಿದೆ. ಹತ್ತು ದಿನಗಳಲ್ಲಿ ತೆರವಾಗದಿದ್ದರೆ, ನ್ಯಾಯಾಂಗ ನಿಂದನೆ ಆರೋಪದ ಜತೆಗೆ ನಿಯಮ ಉಲ್ಲಂಘನೆ ಅಡಿ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಟಿ.ಎಚ್.ಎಂ. ಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನ್ಯಾಯಾಲಯಕ್ಕೆ ಶಿಫಾರಸು :
ಈ ಸಂಬಂಧ ಎಲ್ಲ ನಿಗಮ, ಮಂಡಳಿ, ಸಂಸ್ಥೆಗಳಿಗೆ ಪತ್ರ ಬರೆದು, ಅನಧಿಕೃತವಾಗಿ ಅಳವಡಿಸಿರುವ ಲಾಂಛನ/ಚಿಹ್ನೆ, ಹೆಸರುಗಳನ್ನು ತೆರವುಗೊಳಿಸುವಂತೆ ಪತ್ರ ಬರೆಯಲಾಗುವುದು. ಪ್ರತೀ ತಿಂಗಳು ಈ ಬಗ್ಗೆ ಸಾರಿಗೆ ಆಯುಕ್ತರಿಗೆ ಮಾಹಿತಿ ನೀಡಬೇಕು. ಒಂದು ವೇಳೆ ವಿಫಲರಾದಲ್ಲಿ, ಆಯಾ ಕಚೇರಿಗಳ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ, ನ್ಯಾಯಾಂಗ ನಿಂದನ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಶಿಫಾರಸು ಮಾಡಲಾಗುವುದು ಎಂದವರು ಹೇಳಿದರು.
ಮಾಹಿತಿಗೆ ಸಹಾಯವಾಣಿ :
ದುರ್ಬಳಕೆ ತಪ್ಪಿಸಲು ಸಾರಿಗೆ ಇಲಾಖೆ ಸಹಾಯವಾಣಿ ಆರಂಭಿಸಿದ್ದು, ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ವಾಟ್ಸ್ ಆ್ಯಪ್ ಸಂಖ್ಯೆ: 9449863459 ಇಲ್ಲಿಗೆ ಮಾಹಿತಿ ನೀಡಬೇಕು ಎಂದು ಕುಮಾರ್ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.