ಬರುವವರೆಗೆ ಸುಮ್ಮನಿರಿ: ಸಿಎಂ
Team Udayavani, Jul 2, 2019, 3:06 AM IST
ಬೆಂಗಳೂರು: ಕಾಂಗ್ರೆಸ್‌ನ ಇಬ್ಬರು ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಿಂದಲೇ ಅತೃಪ್ತ ಶಾಸಕರ ಜತೆ ದೂರವಾಣಿ ಮೂಲಕ ಚರ್ಚಿಸಿ ಮನವೊಲಿಸುವ ಪ್ರಯತ್ನ ನಡೆಸಿದರು.
ಭೀಮಾನಾಯ್ಕ, ಮಹೇಶ್ ಕುಮಟಳ್ಳಿ, ಅಮರೇಗೌಡ ಬಯ್ನಾಪುರ, ಬಿ.ಸಿ.ಪಾಟೀಲ್ ಸೇರಿ ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಸಂಪರ್ಕಿಸಿದ ಕುಮಾರಸ್ವಾಮಿ, ಅಮೆರಿಕದಿಂದ ಬರುವವರೆಗೂ ಸುಮ್ಮನಿರಿ ಎಂದು ಮನವಿ ಮಾಡಿದರು.
ಆನಂದ್‌ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಮಾತನಾಡಿ, ರಾಜೀನಾಮೆ ವಾಪಸ್ ಪಡೆಯುವಂತೆ ಕೋರಿದರು. ಆದರೆ, ಪರಿಸ್ಥತಿ ಮೀರಿ ಹೋಗಿದೆ ಎಂದು ಇಬ್ಬರೂ ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಮೆರಿಕ ಪ್ರವಾಸ ಮುಂದುವರಿಸಬೇಕಾ? ಅಥವಾ ವಾಪಸ್ ಆಗಬೇಕಾ ಎಂಬ ಬಗ್ಗೆ ಕುಮಾರಸ್ವಾಮಿಯವರು ಯೋಚಿಸುತ್ತಿದ್ದು ಪರಿಸ್ಥಿತಿ ಕೈ ಮೀರುವ ಸ್ಥಿತಿ ನಿರ್ಮಾಣವಾದರೆ ಪ್ರವಾಸ ಮೊಕುಗೊಳಿಸಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ, ಕುಮಾರಸ್ವಾಮಿಯವರು ಟ್ವೀಟ್ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ವಿಧಾನಸಭೆ ಫಲಿತಾಂಶದ ದಿನ ಕಾಲಭೈರವೇಶ್ವರನ ಪೂಜೆ ಮಾಡಿದ್ದೆ. ಫಲಿತಾಂಶ ಬಂದ ನಂತರ ರಾಜಕೀಯ ನಿವೃತ್ತಿಗೆ ಯೋಚಿಸಿದ್ದೆ.
ಆದರೆ, ಕಾಂಗ್ರೆಸ್ ನಾಯಕರು ಮಾತುಕತೆಗೆ ಕರೆದರು. ಆಶ್ಚರ್ಯಕರ ರೀತಿಯಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾದೆ. ಕಾಲಭೈರವೇಶ್ವರನ ಕೃಪೆಯಿಂದಲೇ ಮುಖ್ಯಮಂತ್ರಿ ಸ್ಥಾನ ದೊರೆಯಿತು ಎಂದು ತಿಳಿಸಿದ್ದಾರೆ.
ವೇಣುಗೋಪಾಲ್ ಜತೆ ಗೌಡರ ಚರ್ಚೆ: ರಾಜ್ಯ ರಾಜಕೀಯದಲ್ಲಿ ದಿಢೀರ್ ಉಂಟಾದ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜತೆ ಚರ್ಚಿಸಿದರು.
ಬೆಳಗ್ಗೆ ಪಕ್ಷದ ಕಚೇರಿಗೆ ಆಗಮಿಸಿ ಮುಖಂಡರ ಜತೆ ಸಮಾಲೋಚನೆ ನಡೆಸಿ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಗೌಡರು ಇಬ್ಬರು ಶಾಸಕರ ರಾಜೀನಾಮೆಯಿಂದ ಉಂಟಾದ ಬೆಳವಣಿಗೆ ಬಗ್ಗೆ ಹಲವು ನಾಯಕರ ಜತೆ ಚರ್ಚಿಸಿ ಮನೆಯಲ್ಲೇ ಕುಳಿತು ಗಮನಿಸುತ್ತಿದ್ದರು.
ನಂತರ ಅಮೆರಿಕದಲ್ಲಿರುವ ಸಿಎಂ ಕುಮಾರಸ್ವಾಮಿ ಜತೆ ದೂರವಾಣಿ ಮೂಲಕ ಚರ್ಚಿಸಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಜತೆಯೂ ಸಮಾಲೋಚನೆ ನಡೆಸಿ ವಿದ್ಯಮಾನಗಳ ಮಾಹಿತಿ ನೀಡಿದರು.
ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಂಬಂಧ ಸಚಿವ ಎಚ್.ಡಿ.ರೇವಣ್ಣ ಜತೆ ಮಾತನಾಡಿದರು. ಅಗತ್ಯವಾದರೆ ಮಂಗಳವಾರ ಅಥವಾ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.