“ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಸಿ’
Team Udayavani, Aug 22, 2019, 3:00 AM IST
ಬೆಂಗಳೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾಗಿರುವ ಎರಡು ಕೋಟಿ ರೂ.ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯದ ಎಲ್ಲ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ಪತ್ರ ಬರೆದಿರುವ ಅವರು, ಪ್ರತಿ ಕ್ಷೇತ್ರಕ್ಕೆ ಎರಡು ಕೋಟಿ ರೂ. ನೀಡಲಾಗುತ್ತಿದ್ದು, ಸದರಿ ಮೊತ್ತಕ್ಕೆ ಪ್ರಸಕ್ತ ಆರ್ಥಿಕ ವರ್ಷದ ಪ್ರಾರಂಭದಲ್ಲಿಯೇ ಕ್ರಿಯಾಯೋಜನೆ ಸಲ್ಲಿಸಿ, ಜೂನ್ ಅಂತ್ಯದೊಳಗೆ ಅನುಮತಿ ಪಡೆದು, ಕಾಮಗಾರಿ ಅನುಷ್ಠಾನಗೊಳಿಸಬೇಕು.
2018-19ನೇ ಸಾಲಿನ ಕ್ರಿಯಾ ಯೋಜನೆಯ ಮಾಹಿತಿಯಂತೆ 11 ಶಾಸಕರು ಹಾಗೂ 24 ವಿಧಾನ ಪರಿಷತ್ ಸದಸ್ಯರು ಪ್ರಸ್ತಾವನೆ ಸಲ್ಲಿಸಿಲ್ಲ. ಉಳಿದ ಶಾಸಕರು 2 ಕೋಟಿ ರೂ.ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಸಲ್ಲಿಸದಿರುವುದು ಕಂಡು ಬಂದಿದೆ. ಇದರಿಂದ ಪ್ರಗತಿ ಕುಂಠಿತವಾಗಿದೆ. ಹೀಗಾಗಿ, ಶಾಸಕರು ವೈಯಕ್ತಿಕವಾಗಿ ಈ ಬಗ್ಗೆ ಗಮನ ಹರಿಸಿ 2018-19 ಹಾಗೂ 2019 -20ನೇ ಸಾಲಿಗೆ 2 ಕೋಟಿ ರೂ.ಕಾಮಗಾರಿಗಳ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ತುರ್ತಾಗಿ ನೀಡಬೇಕು. ಕ್ಷೇತ್ರದಲ್ಲಿ ಅಗತ್ಯ ಇರುವ ಅಂಗನವಾಡಿ, ಶಾಲೆ, ಆಸ್ಪತ್ರೆ, ಕಟ್ಟಡ, ನೀರು ಸಂಗ್ರಹಣೆ ಮತ್ತು ಪುನಶ್ಚೇತನ ಕಾಗಾರಿಗಳನ್ನು ನರೇಗಾ ಜತೆ ಕ್ರೋಢೀಕರಿಸಿ ಕೈಗೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.