ತೈಲದ ತೆರಿಗೆಯನ್ನು ಬಡವರ ಯೋಜನೆಗೆ ಬಳಸಿ: ಎಚ್.ಡಿ. ಕುಮಾರಸ್ವಾಮಿ
Team Udayavani, Sep 17, 2021, 6:50 AM IST
ಬೆಂಗಳೂರು: ಪೆಟ್ರೋಲ್, ಡೀಸೆಲ್‌ನಿಂದ ಬರುತ್ತಿರುವ ತೆರಿಗೆ ಹಣದಿಂದ ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಜನರ ಅನುಕೂಲಕ್ಕೆ ರಾಜ್ಯ ಸರಕಾರ ವಿಶೇಷ ಯೋಜನೆ ಘೋಷಿಸಬೇಕು ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಲಾಕ್‌ಡೌನ್ ಪರಿಣಾಮವಾಗಿ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದರು. ಈ ವಿಚಾರದಲ್ಲಿ ರಾಜಕೀಯ ಪಕ್ಷದ ಆಧಾರದಲ್ಲಿ ಚರ್ಚಿಸುವ ಬದಲು ಎಲ್ಲರೂ ಒಟ್ಟಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಬೇಕಿದೆ ಎಂದರು.
ದೇಶದ ಪ್ರತಿಯೊಬ್ಬ ವ್ಯಕ್ತಿ ಯಾವುದಾದರೂ ರೀತಿಯಲ್ಲಿ ವರ್ಷದಲ್ಲಿ 1 ಲಕ್ಷ ರೂ. ತೆರಿಗೆ ಕಟ್ಟುತ್ತಾನೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ನಾವು ಬಡವರಿಗೆ ಒಂದು ಹೊತ್ತಿನ ಊಟ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಿರುವಾಗ ಸರಕಾರ ತೈಲದ ತೆರಿಗೆ ಹಣದಿಂದ ಬಡವರಿಗೆ ಹೊಸ ಯೋಜನೆ ರೂಪಿಸಬೇಕಿದೆ ಎಂದರು.
ಒಂದು ವರ್ಷದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆಯಿಂದ 19 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಕಾರ್ಪೊರೇಟ್ ಕಂಪೆನಿಗಳಿಂದ ಬರುತ್ತಿದ್ದ ತೆರಿಗೆ 5.6 ಲಕ್ಷ ಕೋಟಿ ಯಿಂದ 4.2 ಲಕ್ಷ ಕೋಟಿ ರೂ.ಗೆ ಇಳಿದಿದೆ. ಆದರೆ, ಸಾಮಾನ್ಯ ಜನರಿಂದ ಸಂಗ್ರಹವಾಗುತ್ತಿದ್ದ 2 ಲಕ್ಷ ಕೋಟಿ ರೂ. ಈಗ ಮೂರು ಲಕ್ಷ ಕೋಟಿ ರೂ.ಗೆ ಏರಿದೆ ಎಂದು ವಿವರಿಸಿದರು.
ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ಧಾಳಿ:
ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಾಗ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದರು. ಅವರು ಚುನಾವಣೆ ಹೋಗುವ ಮುನ್ನ 5 ಕೆ.ಜಿ. ಬದಲು 7 ಕೆ.ಜಿ. ಅಕ್ಕಿ ಕೊಡುವುದಾಗಿ ಘೋಷಿಸಿದರು. ಆದರೆ 5 ಕೆ.ಜಿ.ಗೆ ಮಾತ್ರ ಅನುದಾನ ಮೀಸಲಿಟ್ಟು, 7 ಕೆ.ಜಿ. ಯೋಜನೆಯನ್ನು ಜಾರಿ ಮಾಡಲೇಬೇಕೆಂದು ಒತ್ತಡ ಹೇರಿದರು ಎಂದರು.
ಕ್ಷೇತ್ರ ಪುನರ್‌ವಿಂಗಡಣೆಗೆ ಆಯೋಗ: ವಿಧೇಯಕ ಅಂಗೀಕಾರ:
ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರ ಪುನರ್‌ವಿಂಗಡಣೆಗೆ ಆಯೋಗ ರಚನೆ ಮಾಡುವ ಉದ್ದೇಶದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕವು ವಿಪಕ್ಷ ಕಾಂಗ್ರೆಸ್ ಸಭಾತ್ಯಾಗದೊಂದಿಗೆ ಅಂಗೀಕಾರಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.