Govt., ಎಸ್‌ಸಿ-ಎಸ್‌ಟಿ ಹಣ ಅನ್ಯ ಯೋಜನೆಗೆ ಬಳಕೆ
ರಾಜ್ಯ ಅನುಸೂಚಿತ ಪಂಗಡ ಸಮಿತಿಯಿಂದಲೇ ಆರೋಪ; ತತ್‌ಕ್ಷಣ ಸರಿಪಡಿಸಿ: ಆಗ್ರಹ
Team Udayavani, Jul 26, 2024, 6:35 AM IST
ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ (ಎಸ್‌ಸಿಎಸ್‌ಪಿ- ಟಿಎಸ್‌ಪಿ) ಹಣವನ್ನು ಸರಕಾರ ವಿವಿಧ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು, “ಇದು ಶಿಕ್ಷಾರ್ಹ ಅಪರಾಧವಾಗಿದೆ.
ಕೂಡಲೇ ಈ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ಮೂಲಸೌಕರ್ಯಗಳಿಗೆ ಮತ್ತು ವಿದ್ಯಾರ್ಥಿ ವೇತನಕ್ಕೆ ಹಂಚಿಕೆ ಮಾಡಬೇಕು’ ಎಂದು ಶಿಫಾರಸು ಮಾಡಿದೆ.
ಮೇಲ್ಮನೆಯಲ್ಲಿ ಗುರುವಾರ ಸಮಿತಿಯು ಎಸ್‌ಸಿಎಸ್‌ಪಿ- ಟಿಎಸ್‌ಪಿ ಅನುದಾನ ಮತ್ತು ನೇಮಕಾತಿ ಕುರಿತು ಸರಕಾರ ಕೈಗೊಳ್ಳಬೇಕಾದ ಕ್ರಮಗಳ ವರದಿ ಮಂಡಿಸಿತು. ಅದರಲ್ಲಿ ಸಾರಿಗೆ ಇಲಾಖೆಯು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಎಸ್‌ಸಿಎಸ್‌ಪಿ- ಟಿಎಸ್‌ಪಿ ಅನುದಾನ ಬಳಸಿರುವುದಾಗಿ ಹೇಳಿದೆ. ಇದು ಕಾಯ್ದೆಗೆ ವಿರುದ್ಧವಾಗಿದೆ ಎಂದಿದೆ.
ಎಲ್ಲ ವರ್ಗಗಳಿಗೆ ವಿದ್ಯಾರ್ಥಿಗಳ ಪಾಸ್ ನೀಡುತ್ತಿದ್ದು, ಇದಕ್ಕಾಗಿ ಎಸ್‌ಸಿಎಸ್‌ಪಿ- ಟಿಎಸ್‌ಪಿ ಅನುದಾನ ಬಳಸಲಾಗುತ್ತಿದೆ. ಬಹುತೇಕ ಇಲಾಖೆಗಳು ಇದೇ ರೀತಿ ಶೋಷಿತ ಸಮುದಾಯಗಳಿಗೆ ನೀಡಿದ ಅನುದಾನವನ್ನು ಸಾಮೂಹಿಕವಾಗಿ ಬಳಸಿಕೊಳ್ಳುತ್ತಿರುವುದಾಗಿ ಹೇಳಿವೆ. ಅದರಲ್ಲೂ ಶಿಕ್ಷಣ ಇಲಾಖೆಯಲ್ಲಿ ಪುಸ್ತಕಗಳು, ಶೂಗಳಿಗೆಂದು ಎಲ್ಲ ಶೇ. 45ರಷ್ಟು ಹಣವನ್ನು ಖರ್ಚು ಮಾಡುತ್ತಿರುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ. ಅಲ್ಲದೆ ಇದು ಶಿಕ್ಷಾರ್ಹ ಪ್ರಕರಣ ಎಂದು ಸಮಿತಿ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.
“ಕಟ್ಟಡ ಕಾಮಗಾರಿ ಸೆಸ್: ಪಾಲು ಸಿಗಲಿ’
ಕಟ್ಟಡ ಕಾಮಗಾರಿಯಲ್ಲಿ ಸಂಗ್ರಹವಾಗುವ ಶೇ. 1ರಷ್ಟು ಸೆಸ್ ಮೊತ್ತದಲ್ಲಿ ಶೇ. 24.1ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕೆ ಖರ್ಚು ಮಾಡಲು ಕಾಯ್ದೆಯಲ್ಲಿ ಸೇರ್ಪಡೆಗೊಳಿಸಬೇಕು. ಹೀಗೆ ಸೇರ್ಪಡೆ ಮಾಡುವ ಅನುದಾನದಲ್ಲಿ ಆ ವರ್ಗಗಳ ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಬೇಕು ಎಂದೂ ವರದಿ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.